ಕಾಂಗ್ರೆಸ್ ಬೆಂಬಲಿತ ಮತೀಯ ಶಕ್ತಿಗಳ ಅಟ್ಟಹಾಸಕ್ಕೆ ಕಡಿವಾಣ ಯಾವಾಗ..? : ಕ್ಯಾಪ್ಟನ್ ಬ್ರಿಜೇಶ್ ಚೌಟ

6:25 PM, Monday, June 10th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಪದಗ್ರಹಣದ ಅಂಗವಾಗಿ ಬಂಟ್ವಾಳ ತಾಲೂಕಿನ ಬೋಳಿಯಾರಿನಲ್ಲಿ ನಡೆದ ಸಂಭ್ರಮಾಚರಣೆಯನ್ನು ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಬಿಜೆಪಿ ಕಾರ್ಯಕರ್ತ ಹರೀಶ್ ಅಂಚನ್‌ ಹಾಗೂ ವಿನೋದ್ ಅವರ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪ್ರತಿಕ್ರಯಿಸಿ “ಜಿಲ್ಲೆಯಲ್ಲಿ ಇದೇ ಮಾದರಿಯ ಘಟನೆಗಳು ಪದೇ ಪದೇ ನಡೆಯುತ್ತಿದ್ದು ರಾಜ್ಯ ಸರಕಾರ ಏನು ಮಾಡುತ್ತಿದೆ” ಎಂದು ಪ್ರಶ್ನಿಸಿದ್ದಾರೆ.

ತಮ್ಮ ಪಕ್ಷದ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ “ಕೆಲ ದಿನಗಳ ಹಿಂದೆಯಷ್ಟೇ ಬೆಳ್ತಂಗಡಿ ಮತ್ತು ಉಳ್ಳಾಲದಲ್ಲಿ ಇದೇ ಮಾದರಿಯ ಹಲ್ಲೆ ನಡೆದಾಗ ಪೊಲೀಸ್ ಇಲಾಖೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರೂ ಗಂಭೀರವಾಗಿ ಪರಿಗಣಿಸಿದ ಕಾರಣ ಈ ರೀತಿಯ ಘಟನೆಯು ಪದೇ ಪದೇ ಮರುಕಳಿಸುತ್ತಿದೆ. ಕಾಂಗ್ರೆಸ್ ಬೆಂಬಲಿತ ಮತೀಯ ಶಕ್ತಿಗಳ ಅಟ್ಟಹಾಸ ದಿನೇ ದಿನೇ ಹೆಚ್ಚುತ್ತಿದ್ದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ವಿಫಲಗೊಂಡಿದೆ.ಹತಾಶಗೊಂಡಿರುವ ಕಾಂಗ್ರೆಸ್ ರಾಜಕೀಯ ದ್ವೇಷವನ್ನು ಸಾಧಿಸಲು ನಮ್ಮ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಈ ಹಲ್ಲೆಗಳನ್ನು ನಡೆಸುತ್ತಿರುವುದು ಕಳವಳಕಾರಿ” ಎಂದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇನ್ನು ಈ‌ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆಯನ್ನು ವಿಧಿಸದೆ ಇಲ್ಲದಿದ್ದಲ್ಲಿ ಪರಿಣಾಮ ಸರಿ ಇರದು ಎಂಬ ಖಡಕ್ ಸಂದೇಶ ಕೂಡ ರಾಜ್ಯ ಸರಕಾರಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ನೀಡಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English