ಪರಶುರಾಮ ಥೀಂ ಪಾರ್ಕ್ ಕಾಮಗಾರಿ ವಿವಾದ, ಕಾಂಗ್ರೆಸ್ ಮುಖಂಡರ ವಿರುದ್ಧ ಪ್ರಕರಣಕ್ಕೆ ರಾಜ್ಯ ಉಚ್ಛ ನ್ಯಾಯಾಲಯ ತಡೆಯಾಜ್ಞೆ

7:02 PM, Thursday, April 11th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಕಾರ್ಕಳ : ಪರಶುರಾಮ ಥೀಂ ಪಾರ್ಕ್ ನಲ್ಲಿ ಪ್ರತಿಷ್ಟಾಪನೆಗೊಂಡ ಪರಶುರಾಮನ ಪ್ರತಿಮೆ ರಹಸ್ಯ ಬಯಲಿಗೆಳೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ಕಾಂಗ್ರೆಸ್ ಮುಖಂಡರ ವಿರುದ್ಧ ನಗರ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ರಾಜ್ಯ ಉಚ್ಛ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ.

ಕಳೆದ ಅ. 22ರಂದು ಪರಶುರಾಮ ಥೀಂ ಪಾರ್ಕ್ ಗೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಭೇಟಿ ನೀಡಿ ಪ್ರತಿಮೆಯ ಗುಣಮಟ್ಟದ ಪರಿಶೀಲನೆ ನಡೆಸಿ ನಿರ್ಮಿತಿ ಕೇಂದ್ರದ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದಿದ್ದರು.

ಕಾಂಗ್ರೆಸ್ ಮುಖಂಡರು ಫೈಬರ್ ಅವಶೇಷಗಳನ್ನು ಹಿಡಿದುಕೊಂಡು ಸಾರ್ವಜನಿಕರಿಗೆ ಮಾಹಿತಿ ನೀಡುವ ವೀಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಂಡಿದ್ದವು. ಇದನ್ನಾಧರಿಸಿ ಎರ್ಲಪಾಡಿ ಗ್ರಾ.ಪಂ. ಅಧ್ಯಕ್ಷ ಸುನಿಲ್ ಹೆಗ್ಡೆ ಕಾರ್ಕಳ ನಗರ ಠಾಣೆಗೆ ನೀಡಿದ ದೂರಿನನ್ವಯ ಕಾಂಗ್ರೆಸ್ ಮುಖಂಡರಾದ ಪುರಸಭೆ ಸದಸ್ಯ ಶುಭದ ರಾವ್, ಮಾಜಿ ಅಧ್ಯಕ್ಷ ಸುಭಿತ್ ಕುಮಾರ್, ಮಾಜಿ ಸದಸ್ಯ ವಿವೇಕಾನಂದ ಶೆಣೈ ಮತ್ತು ಐವನ್ ಮಿರಾಂಡ ಸೇರಿದಂತೆ ಒಟ್ಟು 4 ಮಂದಿಯ ವಿರುದ್ಧ ನಗರ ಠಾಣೆಯಲ್ಲಿ ಐಪಿಎಸ್ ಸೆಕ್ಷನ್ 442, 505(2) ಮತ್ತು 34 ಪ್ರಕಾರ ಕೇಸು ದಾಖಲಿಸಿದ್ದರು.

ಇದೀಗ ಕಾಂಗ್ರೆಸ್ ಮುಖಂಡರು ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ ಪ್ರಕರಣಕ್ಕೆ , ಏ.4ರಂದು ನ್ಯಾಯಾಲಯವು ತಡೆಯಾಜ್ಞೆ ನೀಡಿದೆ. ನ್ಯಾಯವಾದಿ ಕೆರೆಬೆಟ್ಟು ಪ್ರಸನ್ನ ಶೆಟ್ಟಿ ಈ ಪ್ರಕರಣದ ಬಗ್ಗೆ ವಾದಿಸಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English