ಲೋಕಸಭಾ ಚುನಾವಣೆ-ಕಾರ್ಮಿಕರಿಗೆ ವೇತನ ಸಹಿತ ರಜೆ

9:44 PM, Thursday, April 11th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು :- ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಇದೇ ಏ.26 ರ ಶುಕ್ರವಾರ ಚುನಾವಣಾ ಮತದಾನ ನಡೆಯಲಿದೆ. ಆ ದಿನದಂದು ಜಿಲ್ಲೆಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳ ಮಾಲೀಕರು ಅರ್ಹ ಮತದಾರರಾಗಿರುವ ಎಲ್ಲಾ ಖಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಒಂದು ದಿನದ ವೇತನ ಸಹಿತ ರಜೆ ನೀಡುವಂತೆ ಹಾಗೂ ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆ/ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English