ಮಂಗಳೂರು : ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಸಾಮಾನ್ಯರ ಜನರ ಬದುಕನ್ನು ಕಸಿದುಕೊಳ್ಳುತ್ತಿದೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಆರೋಪಿಸಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆ ಹೆಚ್ಚಳ ಮಾಡಿರುವ ಕಾಂಗ್ರೆಸ್ ಸರ್ಕಾರ ಅವೈಜ್ಞಾನಿಕ ಗ್ಯಾರೆಂಟಿ ಯೋಜನೆಗಳಿಗೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಹಣ ಸರಿದೂಗಿಸಲು ಹೆಣಗಾಡುತ್ತಿದೆ ಎಂದರು.
ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ತಲಾ ಮೂರು ರೂ ಹೆಚ್ಚಳ ಮಾಡಲಾಗಿದ್ದು, ಒಮ್ಮೆಲೇ ಅತೀ ಹೆಚ್ಚು ಮಾರಾಟ ತೆರಿಗೆ ಇದಾಗಿದೆ, ಚುನಾವಣೆ ಮುಗಿಯುತ್ತಿದ್ದಂತೆ ಪೆಟ್ರೋಲ್ ದರ ಏರಿಸಿರುವ ಕ್ರಮ ಖಂಡನೀಯ ಎಂದರು.
ಜನಸಾಮಾನ್ಯರ ಹಿತದೃಷ್ಟಿಯಿಂದ ಕೂಡಲೇ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಇಳಿಕೆ ಮಾಡಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕರ್ನಾಟಕದ ರಾಜ್ಯಪಾಲರನ್ನು ಭೇಟಿಯಾದ ದ.ಕ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ
ಮಂಗಳೂರು ವಿಶ್ವವಿದ್ಯಾನಿಲಯದ 42ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ ಕರ್ನಾಟಕದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಭೇಟಿ ಮಾಡಿ ಮಾತುಕತೆ ನಡೆಸಿದರು.
Click this button or press Ctrl+G to toggle between Kannada and English