ಬಿಜೆಪಿಯಿಂದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ 6 ವರ್ಷ ಅಮಾನತು

10:39 PM, Monday, April 22nd, 2024
Share
1 Star2 Stars3 Stars4 Stars5 Stars
(No Ratings Yet)
Loading...

ಬೆಂಗಳೂರು : ಬಿಜೆಪಿಯಿಂದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಯಜೇಂದ್ರ ಮನವಿ ಮಾಡಿದ್ದರು. ಆದರೆ ಅಂತಿಮವಾಗಿ ಚುನಾವಣಾ ಕಣದಲ್ಲಿ ಉಳಿದಿದ್ದಾರೆ.

ಬಂಡಾಯ ಎದ್ದಿರುವ ಈಶ್ವರಪ್ಪ ಮನವೊಲಿಕೆಗೆ ಕೇಂದ್ರ ನಾಯಕರ ತಂಡ, ರಾಜ್ಯ ನಾಯಕರು, ಸ್ಥಳೀಯರ ಮುಖಂಡರು ಯತ್ನಿಸಿದ್ದರೂ ಯಾವುದೇ ಪ್ರಯೋಜವಾಗಿರಲಿಲ್ಲ. ಇತ್ತೀಚೆಗೆ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ಮನೆಗೆ ಬಂದಾಗ, ವಿಜಯೇಂದ್ರ ಮತ್ತು ಬಿಎಸ್ ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ತಮ್ಮ ಅಸಮಾಧಾನ ಹೊರಹಾಕಿದ್ದರು.

ಇಷ್ಟು ದಿನ ಯಡಿಯೂರಪ್ಪ ಆಯ್ತು. ಈಗ ವಿಜಯೇಂದ್ರಗೆ ಜೈಕಾರ ಹಾಕ್ಬೇಕಾ ಅಂತಾ ಪ್ರಶ್ನಿಸಿದ್ದರು. ಮೋದಿ ಕಾರ್ಯಕ್ರಮ ಇದ್ದಿದ್ದರಿಂದ ಕೊನೆ ಕ್ಷಣದಲ್ಲಿ ನಾಯಕರೂ ಸಹ ಮನವೊಲಿಕೆಗೆ ಮುಂದಾಗಿದ್ದರು. ರಾಮಮಂದಿರದಿಂದ ಕರೆ ಮಾಡಿದ್ದ ಗೋಪಾಲ್ ಅವರ ಸಂಧಾನಕ್ಕೂ ಈಶ್ವರಪ್ಪ ಸೊಪ್ಪು ಹಾಕಿರಲಿಲ್ಲ.

ಯಾವಾಗ ಈಶ್ವರಪ್ಪ ಸ್ಪರ್ಧೆಯಿಂದ ಹಿಂದೆ ಸರಿಯೋ ಮಾತೇ ಇಲ್ಲವಾಯಿತೋ, ಹೀಗಾಗಿ ನೋಡೋ ವರೆಗೂ ನೋಡಿ, ಹೈಕಮಾಂಡ್ ನಾಯಕರು, ರಾಜ್ಯ ಬಿಜೆಪಿ ನಾಯಕರು ಅವರನ್ನು ಮನವೊಲಿಸೋ ಪ್ರಯತ್ನವನ್ನೇ ಬಿಜೆಪಿ ಕೊನೆಗೆ ಕೈಬಿಟ್ಟಿತ್ತು.

ಇಷ್ಟೇ ಅಲ್ಲ ಪಕ್ಷ ತಾಯಿ ಇದ್ದಂತೆ, ಆ ತಾಯಿ ಕತ್ತನ್ನ ಬಿಎಸ್ ಯಡಿಯೂರಪ್ಪ ಮತ್ತು ಮಕ್ಕಳು ಹಿಸುಕ್ತಿದ್ದಾರೆ ಅಂತಾ ಈಶ್ವರಪ್ಪ ಆರೋಪಿಸಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ವಿಜಯೇಂದ್ರ, ಕತ್ತು ಹಿಸುಕಿದ್ರೋ.. ಬೆಳೆಸ್ತಿದ್ದಾರೋ ಅನ್ನೋದು ರಿಸಲ್ಟ್ ಬಂದ್ಮೇಲೆ ಗೊತ್ತಾಗುತ್ತೆ ಎಂದಿದ್ದರು. ಪುತ್ರ ಕೆ.ಇ.ಕಾಂತೇಶ್​ಗೆ ಹಾವೇರಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕೆ.ಎಸ್.ಈಶ್ವರಪ್ಪ ಸ್ಪರ್ಧಿಸುತ್ತಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English