ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ, ಶಾಸಕ ರಾಜೇಶ್ ನಾಯ್ಕ್ ಖಂಡನೆ

9:40 PM, Saturday, June 15th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಬಂಟ್ವಾಳ : ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಏಕಾಏಕಿ ಶೇ.4ರಷ್ಟು ಹೆಚ್ಚಿಸಿದ ರಾಜ್ಯ ಸರಕಾರದ ನೀತಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಖಂಡನೆ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಆಡಳಿತದಲ್ಲಿರುವ ಜನವಿರೋಧಿ ನೀತಿ ಕಾಂಗ್ರೆಸ್ ಸರ್ಕಾರ ತನ್ನ ಅಸಲಿ ಬುದ್ದಿಯನ್ಬು , ಜನವಿರೋಧಿ ನೀತಿಯನ್ನು ಮತ್ತೆ ಪ್ರದರ್ಶಿಸಿದೆ ಎಂದು ಆರೋಪ ಮಾಡಿದ್ದಾರೆ.

ಗ್ಯಾರಂಟಿ ಯೋಜನೆಯ ಮೂಲಕ ಜನರಿಗೆ ಮೋಸ ಮಾಡಿ ಅಧಿಕಾರ ಪಡೆದ ಕಾಂಗ್ರೆಸ್ ಸರಕಾರದ ಬೊಕ್ಕಸ ಖಾಲಿಯಾಗಿದ್ದು ಈಗ ತೆರಿಗೆ ಹೆಚ್ಳಳ ಮಾಡುವ ಮೂಲಕ ಜನತೆಗೆ ಶಾಕ್ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ಜನರ ಹಣವನ್ನು ಲೂಟಿ ಮಾಡಲು ಹೊರಟಿದೆ. ಉಚಿತ ವಿದ್ಯುತ್ ಎಂಬ ನಾಟಕವಾಡಿ ಜನರಿಂದ ದುಪ್ಪಟ್ಟು ಹಣವನ್ನು ಪಡೆಯುತ್ತಿದೆ, ಅದಲ್ಲದೆ ಉಚಿತದ ಹೆಸರಿನಲ್ಲಿ ರಾಜ್ಯದ ಜನರಿಗೆ ಹೊರೆಯಾಗುವ ಎಲ್ಲ ರೀತಿಯ ಶುಲ್ಕಗಳನ್ನು ಏರಿಸಿ ಮೋಸ ಮಾಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಿರುವುದರಿಂದ ಸದ್ಯವೇ ಜನರ ದಿನಬಳಕೆ ವಸ್ತುಗಳ ಮೇಲಿನ ದರ ದುಪ್ಪಟ್ಟು ಆಗಲಿದೆ ಎಂಬ ಆತಂಕ ವ್ಯಕ್ತಪಡಿಸಿದ ಅವರು ಇದರಿಂದ ಜನರ ಜನಜೀವನಕ್ಕೆ ತೊಂದರೆಯಾಗಲಿದೆ ಎಂದರು.

 ರಾಜ್ಯದಲ್ಲಿ ಕಾನೂನು ‌ಸುವ್ಯವಸ್ಥೆ ಸಂಪೂರ್ಣ ‌ಹದಗೆಟ್ಟು ಭಯದ ವಾತಾವರಣ ನಿರ್ಮಾಣವಾಗಿದೆ,ಇದರ ಜೊತೆಯಲ್ಲಿ ಪೆಟ್ರೋಲ್ ಡಿಸೇಲ್ ಬೆಲೆಯ ಏರಿಕೆಯಿಂದ ಜನರು ಮನೆಯಿಂದ ಹೊರಬರದಂತೆ ಮಾಡಿ ರಾಜ್ಯವನ್ನು ಕತ್ತಲಲ್ಲಿ ಇಡುತ್ತಾರೆ ಎಂಬ ಆರೋಪ ಮಾಡಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English