ಬಡಗುತಿಟ್ಟು ಯಕ್ಷಗಾನದ ಶ್ರೇಷ್ಠ ಭಾಗವತ, ಸುಬ್ರಹ್ಮಣ್ಯ ಧಾರೇಶ್ವರ ನಿಧನ

7:30 PM, Thursday, April 25th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಉಡುಪಿ : ಬಡಗುತಿಟ್ಟು ಯಕ್ಷಗಾನದ ಶ್ರೇಷ್ಠ ಭಾಗವತ, ಕರಾವಳಿಯ ಕೋಗಿಲೆ ಸುಬ್ರಹ್ಮಣ್ಯ ಧಾರೇಶ್ವರ(67) ಗುರುವಾರ ನಸುಕಿನ ಜಾವ ಬೆಂಗಳೂರಿನ ಪುತ್ರನ ಮನೆಯಲ್ಲಿ ನಿಧನ ಹೊಂದಿದರು.

ಮೂಲತಃ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಸುಬ್ರಹ್ಮಣ್ಯ ಧಾರೇಶ್ವರರು,. ಹೊಸ ಪ್ರಸಂಗಗಳನ್ನು ನಿರ್ದೇಶಿಸುವ ಮೂಲಕ ರಂಗ ಮಾಂತ್ರಿಕ ಹೆಸರು ಪಡೆದಿದ್ದರು. ಯಕ್ಷಗಾನ ರಂಗ ತಜ್ಞ ಭಾಗವತರೆನಿಸಿದ್ದ ಅವರು ಸುಮಾರು 47 ವರ್ಷಗಳ ಕಾಲ ಯಕ್ಷಗಾನ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ್ದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಧಾರೇಶ್ವರ, ಇಂದು ಮುಂಜಾನೆ 4.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಪತ್ನಿ, ಪುತ್ರ, ಪುತ್ರಿಯನ್ನು ಆಗಲಿದ್ದಾರೆ.

ಪೆರ್ಡೂರ್ ಮೇಳದಲ್ಲಿ 28 ವರ್ಷಗಳ ಕಾಲ ಭಾಗವತರಾಗಿದ್ದರು. ಅದಕ್ಕೂ ಮೊದಲು ಅಮೃತೇಶ್ವರಿ, ಹಿರೇಮಹಾಲಿಂಗೇಶ್ವರ, ಶಿರಸಿ ಮೇಳದಲ್ಲೂ ಭಾಗವತರಾಗಿ ಸೇವೆ ಸಲ್ಲಿಸಿದ್ದರು.

ಯಕ್ಷಗಾನದಲ್ಲಿ ಸಾಂಪ್ರಾದಾಯಿಕ ರಾಗಗಳ ಜೊತೆಗೆ ಹೊಸ ರಾಗಗಳ ಪ್ರಯೋಗದಲ್ಲಿಯೂ ಯಶಸ್ವಿಯಾಗಿದ್ದರು. ಸುಮಾರು 400ಕ್ಕೂ ಅಧಿಕಾರ ಕ್ಯಾಸೆಟ್‌ಗಳಿಗೆ ಧ್ವನಿಯಾಗಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಲಭಿಸಿವೆ.

ಗುರುವಾರ ಸಂಜೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಿರಿಮಂಜೇಶ್ವರದಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English