ಸಮಾಜ ಸೇವಕ ಕೆ.ರವೀಂದ್ರ ಶೆಟ್ಟಿ ಗೆ ಆರ್ಯಭಟ ಪ್ರಶಸ್ತಿ

4:10 PM, Saturday, June 22nd, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ಶಿಕ್ಷಣ, ಧಾರ್ಮಿಕ ಮತ್ತು ಸಮಾಜ ಸೇವಾ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ದೇರಳಕಟ್ಟೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅವರನ್ನು ಪ್ರತಿಷ್ಠಿತ ಆರ್ಯಭಟ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ಪ್ರದಾನ ಸಮಾರಂಭ ಜೂನ್ 23ರಂದು ಸಂಜೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದೆ.

ಕೆ.ರವೀಂದ್ರ ಶೆಟ್ಟಿ ಅವರು ದೇರಳಕಟ್ಟೆಯಲ್ಲಿ ತನ್ನ ತಾಯಿಯ ಹೆಸರಿನಲ್ಲಿ ವಿದ್ಯಾರತ್ನ ಆಂಗ್ಲಮಾಧ್ಯಮ ಶಾಲೆ ಸ್ಥಾಪಿಸಿ ಆರ್ಥಿಕವಾಗಿ ಹಿಂದುಳಿದ ಹಲವಾರು ಮಕ್ಕಳಿಗೆ ಶುಲ್ಕದಲ್ಲಿ ರಿಯಾಯಿತಿ ನೀಡುತ್ತಿರುವುದಲ್ಲದೆ, ಅರ್ಹರಿಗೆ ಉಚಿತ ಶಿಕ್ಷಣದ ವ್ಯವಸ್ಥೆ ಮಾಡಿದ್ದಾರೆ.

ಪ್ರತಿವರ್ಷ ಒಂದು ಸಾವಿರ ಗಿಡಗಳನ್ನು ವಿವಿಧ ಶಾಲಾ ವಿದ್ಯಾರ್ಥಿಗಳಿಗೆ ವಿತರಿಸುವ ಮೂಲಕ ಹಸಿರು ಪರಿಸರ ನಿರ್ಮಾಣಕ್ಕೆ ಕೊಡುಗೆ ನೀಡುತ್ತಿದ್ದಾರೆ. ಪ್ರತಿವರ್ಷ ಉಚಿತ ಆರೋಗ್ಯ ಶಿಬಿರ, ಅರ್ಹರಿಗೆ ಕೃತಕ ಕಾಲು, ಕನ್ನಡಕ, ಗಾಲಿ ಕುರ್ಚಿಗಳ ವಿತರಣೆ ಸಹಿತ ಹಲವಾರು ಸಮಾಜಮುಖಿ ಕಾರ್ಯಕ್ರಮ ನಡೆಸಿಕೊಂಡು ಬಂದಿದ್ದು, ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾ ಪೋಷಕರೂ ಆಗಿದ್ದಾರೆ. ಕರ್ನಾಟಕ ರಾಜ್ಯ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English