ನಗರದ ಅಟಲ್ ಸೇವಾ ಕೇಂದ್ರದಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿಯವರ ಸಂಸ್ಮರಣಾ ದಿನ

10:39 PM, Sunday, June 23rd, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರದ ದಕ್ಷಿಣದ ವತಿಯಿಂದ ನಗರದ ಅಟಲ್ ಸೇವಾ ಕೇಂದ್ರದಲ್ಲಿ ಜನಸಂಘದ ಸ್ಥಾಪಕಾಧ್ಯಕ್ಷರಾದ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿಯವರ ಸಂಸ್ಮರಣಾ ದಿನವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ರಾಷ್ಟ್ರೀಯ ವಿಚಾರಧಾರೆ ಹೊಂದಿರುವ ಭಾರತೀಯ ಜನಸಂಘವನ್ನು ಸ್ಥಾಪಿಸಿ ರಾಷ್ಟ್ರಾದ್ಯಂತ ಸಂಚರಿಸಿ ನಮ್ಮೆಲ್ಲರನ್ನೂ ಒಂದು ತತ್ವಸಿದ್ಧಾಂತದಡಿ ತಂದವರು ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರು. ಬಿಜೆಪಿ ಇಂದು ದೇಶದಾದ್ಯಂತ ತನ್ನ ಬೇರುಗಳನ್ನು ಭದ್ರವಾಗಿ ಊರಲು ಸಾಧ್ಯವಾಗಿದ್ದರೆ ಅದಕ್ಕೆ ಮುಖರ್ಜಿಯವರಂಥ ಅನೇಕ ಮಹನೀಯರ ತ್ಯಾಗ, ಬಲಿದಾನ ಮತ್ತು ಬದ್ಧತೆಯೇ ಕಾರಣವಾಗಿದೆ ಎಂದರು.

ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ, ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ ಅಖಂಡ ಭಾರತದ ಘೋಷಣೆಯನ್ನು ಮತ್ತೊಮ್ಮೆ ಮೊಳಗಿಸಿದ್ದು ಮುಖರ್ಜಿಯವರ ಬಲಿದಾನಕ್ಕೆ ಸಲ್ಲಿಸುವ ಶ್ರೇಷ್ಠ ಗೌರವವಾಗಿದೆ ಎಂದು ಶಾಸಕರು ಹೇಳಿದರು.

ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಮಾಜಿ ಮೂಡ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಜಿಲ್ಲಾ ಹಾಗೂ ಮಂಡಲದ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಪಾಲಿಕೆ ಸದಸ್ಯರು, ಶಕ್ತಿಕೇಂದ್ರ ಪ್ರಮುಖರು, ಬೂತ್ ಅಧ್ಯಕ್ಷರು, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English