ಮನೆ ಕುಸಿದು ಇಬ್ಬರು ಮಕ್ಕಳ ಸಹಿತ ದಂಪತಿ ಮೃತ್ಯು

12:37 PM, Wednesday, June 26th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಉಳ್ಳಾಲ: ಪಕ್ಕದ ಮನೆಯ ಆವರಣ ಗೋಡೆ ಕುಸಿದು ಇನ್ನೊಂದು ಮನೆಯ ಮೇಲೆ ಬಿದ್ದ ಪರಿಣಾಮ ಇಬ್ಬರು ಮಕ್ಕಳ ಸಹಿತ ದಂಪತಿ ಮೃತಪಟ್ಟ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರ ಎಂಬಲ್ಲಿ ನಡೆದಿದೆ.

ಮೃತರನ್ನು ಯಾಸಿರ್(45),ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಎಂದು ಗುರುತಿಸಲಾಗಿದೆ.

ಅಬೂಬಕ್ಕರ್ ಎಂಬವರ ಮನೆಯ ಆವರಣ ಗೋಡೆ ಕುಸಿದು ಯಾಸಿರ್ ಅವರ ಮನೆಯ ಗೋಡೆ ಮೇಲೆ ಬಿದ್ದು ದುರಂತ ಸಂಭವಿಸಿದೆ. ಮನೆಯ ಅವಶೇಷಗಳ ಅಡಿಯಿಂದ ಮೂವರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಬಾಲಕಿಯೊಬ್ಬಳ ಮೃತದೇಹಕ್ಕಾಗಿ ಕಾರ್ಯಾಚರಣೆ ಮುಂದುವರಿದಿದೆ.

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದು, ತಲಾ ಐದು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English