ಮನೆಯ ಕಿಟಕಿಯ ಸರಳಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ

5:58 PM, Wednesday, June 26th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಬಂಟ್ವಾಳ: ಯುವಕನೋರ್ವ ಮನೆಯ ಕಿಟಕಿಯ ಸರಳಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬಂಟ್ವಾಳ ನರಿಕೊಂಬು ಎಂಬಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಯುವಕ ಬಂಟ್ವಾಳ ನಿವಾಸಿ ಶೇಖರ ಪೂಜಾರಿ ಅವರ ಎರಡನೇ ಮಗ ರಮೇಶ್ (22) ಎಂದು ತಿಳಿದು ಬಂದಿದೆ.

ರಮೇಶ್ ವಿಷ ಪದಾರ್ಥ ಸೇವಿಸಿ ಬಳಿಕ ಕಿಟಕಿಗೆ ಹಗ್ಗ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬೇಕೆಂಬ ಶಂಕೆ ವ್ಯಕ್ತವಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರನ ಇನ್ನೂ ತಿಳಿದು ಬಂದಿಲ್ಲ.

ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೋಲೀಸರು, ನರಿಕೊಂಬು ಗ್ರಾ.ಪಂ.ಅಧ್ಯಕ್ಷ ಸಂತೋಷ್ ಕುಮಾರ್ ಭೇಟಿ ನೀಡಿದ್ದಾರೆ. 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English