ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಮನವಿ

1:31 PM, Thursday, June 27th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಹಾದು ಹೋಗುವ ಪ್ರಮುಖ ನಗರಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಗಳನ್ನು ಹಾಗೂ ಪ್ರಮುಖ ಮುಖ್ಯ ಸಂಪರ್ಕ ರಸ್ತೆಗಳನ್ನು ಮೇಲ್ದರ್ಜೆಗೇರಿಸಿ, ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್‌ ಗಡ್ಕರಿ ಅವರನ್ನು ಕಾರ್ಕಳ ಶಾಸಕರು ಹಾಗೂ ಮಾಜಿ ಸಚಿವರಾದ ವಿ ಸುನಿಲ್‌ ಕುಮಾರ್‌ ರವರು ದೆಹೆಲಿಗೆ ತೆರಳಿ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ನೂತನ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರೊಂದಿಗೆ ಭೇಟಿ ಮಾಡಿ ಮನವಿ ಸಲ್ಲಿಸಿ ಹೆದ್ದಾರಿಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ ಚರ್ಚಿಸಿದರು.

ಪ್ರಸ್ತುತ ಕಾರ್ಕಳ ಪುಲ್ಕೇರಿ ಬೈಪಾಸ್‌ ನಿಂದ ಮಾಳ-ಮುಳ್ಳೂರು ತನಕ ರಾಷ್ಟ್ರೀಯ ಹೆದ್ದಾರಿ 169 ಚತುಷ್ಪಥ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಇದಕ್ಕೆ ಅನುದಾನ ಬಿಡುಗಡೆಗೊಳಿಸಿ, ಅಭಿವೃದ್ಧಿಗೆ ಸಹಕರಿಸುವುದನ್ನು ಮಾನ್ಯ ಕೇಂದ್ರ ಸಚಿವರ ಗಮನಕ್ಕೆ ತಂದು ಕೃತಜ್ಞತೆಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ.ಸೋಮಣ್ಣ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ. ರಾಘವೇಂದ್ರ ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English