ಮಂಗಳೂರು : ನಿರಂತರವಾಗಿ ಸುರಿಯುತ್ತಿದ್ದ ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಬುಧವಾರ ರಾತ್ರಿ ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ.
ಘಟನೆ ನಿನ್ನೆ 9ಗಂಟೆಗೆ ನಡೆದಿರುವುದು ಸಿಸಿ ಕ್ಯಾಮೆರಾ ದಲ್ಲಿ ದಾಖಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಮೃತ ರಿಕ್ಷಾ ಚಾಲಕರನ್ನು ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ನಿವಾಸಿ ರಾಜು(50) ಮತ್ತು ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ರಾಮಕುಂಜ ನಿವಾಸಿ ದೇವರಾಜು(46) ಎಂದು ಗುರುತಿಸಲಾಗಿದೆ.
ಒಬ್ಬರು ಪುತ್ತೂರು ಹಾಗೂ ಇನ್ನೊಬ್ಬರು ಸಕಲೇಶಪುರದವರು. ಇಬ್ಬರೂ ಪಾಂಡೇಶ್ವರದ ರೊಸಾರಿಯೋ ಚರ್ಚ್ ಹಿಂಬದಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದರು.
ರಿಕ್ಷಾ ಸ್ವಚ್ಚ ಗೊಳಿಸಲು ಹೊರಬಂದಿದ್ದ ರಾಜು ಅವರು, ರಿಕ್ಷಾ ತೊಳೆಯುವ ವೇಳೆ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದರು. ಇದನ್ನು ಕಂಡ ದೇವರಾಜು ಅವರು ಗೋಣಿ ಚೀಲ ಹಿಡಿದು ರಕ್ಷಣೆಗೆ ಮುಂದಾಗಿದ್ದು, ಈ ವೇಳೆ ವಿದ್ಯುತ್ ಅಘಾತಕ್ಕೆ ಒಳಗಾಗಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮೃತದೇಹಗಳನ್ನು ವೆನ್ಲಾಕ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ ಎಂದು ತಿಳಿದು ಬಂದಿದೆ.
Click this button or press Ctrl+G to toggle between Kannada and English