ರೆಡ್ ಅಲರ್ಟ್ ಘೋಷಣೆ : ಜೂನ್ 28 ರಂದು ಶಾಲೆಗಳಿಗೆ ರಜೆ

8:05 PM, Thursday, June 27th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ದ.ಕ.ಜಿಲ್ಲೆಯಲ್ಲಿ ಮಳೆ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜೂನ್28 ಶುಕ್ರವಾರ ಶಾಲೆಗಳಿಗೆ ರಜೆ ನೀಡಿ ದ.ಕ. ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಶುಕ್ರವಾರ ರಜೆ ಸಾರಲಾಗಿದೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಕ್ಕೆ ಪ್ರವಾಸಿಗರು ತೆರಳದಂತೆ ಮುನ್ಸೂಚನೆ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆಯೂ, ಸಾರ್ವಜನಿಕರು ವಿದ್ಯುತ್ ಕಂಬಗಳು, ತಂತಿಗಳತ್ತ ಹೋಗದಂತೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English