ಮಂಗಳೂರು : ತುಳು ಭಾಷೆಗೆ ಜಾಗತಿಕವಾಗಿ ಸ್ಥಾನ ಮಾನ ದೊರಕಲು ಪ್ರಯತ್ನಗಳು ನಡೆಯುತ್ತಿದ್ದು ಅದರ ಭಾಗವಾಗಿ ಗೂಗಲ್ ಟ್ರಾನ್ಸೇಲಟರ್ ನಲ್ಲಿ ಇತರ ಭಾಷೆಗಳಿಂದ ತುಳು ಭಾಷೆಯ ಅರ್ಥಗಳನ್ನು ಸುಲಭವಾಗಿ ಪಡೆಯಬಹುದಾಗಿದೆ.
ಇದು ತುಳುವರು ಸಂಭ್ರಮಪಡುವಂತವ ವಿಚಾರವಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಹೇಳಿದ್ದಾರೆ.
ಗೂಗಲ್ ಟ್ರಾನ್ಸೇಲಟರ್ ನಲ್ಲಿ ತುಳು ಸೇರ್ಪಡೆಗೊಂಡಿರುವುರಿಂದ ತುಳುನಾಡಿಗೆ ಬರುವ ಪ್ರವಾಸಿಗರಿಗೆ ತುಳುವರೊಂದಿಗೆ ಮಾತನಾಡಲು ಅನುಕೂಲವಾಗಲಿದೆ.
ಕೆಲವು ಸಂದರ್ಭದಲ್ಲಿ ಶಬ್ದಗಳು ತಪ್ಪಾಗಿ ಉಲ್ಲೇಖವಾಗುವುದು ಸಾಮಾನ್ಯ ವಿಚಾರ. ಇಂತಹ ಸಂದರ್ಭಗಳಲ್ಲಿ ಅಲ್ಲೇ ಇರುವ ಫೀಡ್ ಬ್ಯಾಕ್ ಕಾಲಮ್ ನಲ್ಲಿ ಸರಿಯಾದ ಶಬ್ದವನ್ನು ಉಲ್ಲೇಖಿಸಿ ಪ್ರತಿಕ್ರಿಯಿಸಿದರೆ ಗೂಗಲ್ ಅದನ್ನು ಮುಂದಕ್ಕೆ ಸರಿ ಮಾಡಿಕೊಳ್ಳುವುದು. ಈ ಅಂಶವನ್ನು ತುಳುವರು ಸಮರ್ಪಕವಾಗಿ ಬಳಸಿಕೊಂಡರೆ ತುಳುವರಿಗೆ ಹಾಗೂ ತುಳುವೇತರರಿಗೂ ಪ್ರಯೋಜನವಾಗಲಿದೆ.
Click this button or press Ctrl+G to toggle between Kannada and English