ಮಂಗಳೂರು : ರಾಜ್ಯ ಸರ್ಕಾರ ರಾತ್ರೋರಾತ್ರಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದೆ. 25 ಮಂದಿ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಆದೇಶ ನೀಡಿದ್ದು ಈ ವರ್ಗಾವಣೆಗಳ ಪೈಕಿ, ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಿ ಬಿ ರಿಷ್ಯಂತ್ಅವರನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ, ಅಲ್ಲಿ ಅವರು ಈಗ ವೈರ್‌ಲೆಸ್ ವಿಭಾಗಕ್ಕೆ ಎಸ್‌ಪಿಯಾಗಿ ಸೇವೆ ಸಲ್ಲಿಸಲಿದ್ದಾರೆ.
ಮೇ 2023 ರಲ್ಲಿ ರಿಷ್ಯಂತ್ ಅವರು ದ.ಕ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದೀಗ ರಿಷ್ಯಂತ್ ಅವರಿಂದ ಅಧಿಕಾರ ವಹಿಸಿಕೊಂಡವರು ಈ ಹಿಂದೆ ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಯತೀಶ್ ಎನ್. ಇವರು 2016 ರ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿ.
ಕೇಂದ್ರ ವಲಯ ಐಜಿಪಿ ಲಾಬೂರಾಮ್, ಐಜಿಪಿ ಹೆಡ್ ಕ್ವಾಟ್ರರ್ಸ್ -1 ಬೆಂಗಳೂರು (ಡಿಜಿ ಕಛೇರಿ)ಯ ಬಿ, ಆರ್ , ರವಿಕಾಂತೇಗೌಡ, ಐಜಿಪಿ- ಐಎಸ್ ಡಿ ಡಾ ಕೆ ತ್ಯಾಗರಾಜನ್, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್, ಡಿಐಜಿ ಪೂರ್ವವಲಯ ದಾವಣಗೆರೆ ಬಿ ರಮೇಶ್, ಮೈಸೂರು ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್ ಸೇರಿದಂತೆ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ನೀಡಿದೆ.
Click this button or press Ctrl+G to toggle between Kannada and English