ಮಂಗಳೂರು: ಎರಡು ದಿನಗಳ ಜಿಲ್ಲಾ ಪ್ರವಾಸದಲ್ಲಿರುವ ಸಚಿವ ದಿನೇಶ್ ಗುಂಡೂರಾವ್ ಜುಲೈ 6 ಶನಿವಾರ ಎಮ್ಮೆಕೆರೆ ಅಂತರಾಷ್ಟ್ರೀಯ ಈಜುಕೊಳದಲ್ಲಿ ಸ್ವಿಮ್ಮಿಂಗ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ಇಂದು ಮುಂಜಾನೆ ಎಮ್ಮೆಕೆರೆ ಈಜುಕೊಳದಲ್ಲಿ ಈಜಾಡಿದ್ದಾರೆ. ಬಳಿಕ ಈಜುಕೊಳದಲ್ಲಿ ಕೆಲವೊಂದು ವ್ಯವಸ್ಥೆಗಳನ್ನು ಮಾಡಲು ಸೂಚಿಸಿದ್ದಾರೆ. ಲಾಕರ್ ಫೆಸಿಲಿಟಿ , ಕುಡಿಯುವ ನೀರಿನ ವ್ಯವಸ್ಥೆ ಮೊದಲಾದ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈಜಲು ಬರುವವರು ತಮ್ಮ ಅಮೂಲ್ಯ ವಸ್ತುಗಳನ್ನು ಇರಿಸಲು ಲಾಕರ್ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು, ಶುದ್ಧ ಕುಡಿಯುವ ನೀರು ಒದಗಿಸುವಂತೆಯೂ ಹೇಳಿದ್ದಾರೆ.
Click this button or press Ctrl+G to toggle between Kannada and English