ಮಂಗಳೂರು : ದಕ್ಷಿಣ ಕನ್ನಡದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾದ್ಯಂತ ನಾಳೆ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜುಲೈ 09ರಂದು ರಜೆ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂನೆಯಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸಂಭಾವ್ಯ ಹಾನಿಗಳನ್ನು ತಡೆಗಟ್ಟುವಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ.
ಉಡುಪಿ ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರು ಜುಲೈ 09 ರಂದು ಜಿಲ್ಲೆಯ ಎಲ್ಲಾ ಶಾಲಾ, ಪಿಯುಸಿ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
Click this button or press Ctrl+G to toggle between Kannada and English