ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಪತ್ರಕ್ಕೆ ಸ್ಪಂದಿಸಿದ ಕೇಂದ್ರ ರೈಲ್ವೆ ಸಚಿವ ಶ್ರೀ ವಿ. ಸೋಮಣ್ಣ

7:28 PM, Friday, July 12th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ದಕ್ಷಿಣ ಕನ್ನಡದ ರೈಲು ಪ್ರಯಾಣಿಕರ ಪರವಾಗಿ ಮತ್ತು ಸಾಮಾನ್ಯ ನಾಗರಿಕರ ಪರವಾಗಿ ಸಂಸದರು ಕೋರಿದ ಮನವಿ ಮೇರೆಗೆ, ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣ ಅವರು ದಿನಾಂಕ 17.07.2024 ರಂದು ಮಂಗಳೂರಿಗೆ ಆಗಮಿಸಿ ಸಭೆ ನಡೆಸಲು ಒಪ್ಪಿಗೆ ನೀಡಿದ್ದಾರೆ.

ಬೆಳಿಗ್ಗೆ 09.00 ರಿಂದ 09.45 ರ ವರೆಗೆ ಮಂಗಳೂರು ಸೆಂಟ್ರಲ್ ರೇಲ್ವೆ ನಿಲ್ದಾಣದ ವೀಕ್ಷಣ, 10.00 ರಿಂದ 10.45 ರ ವರೆಗೆ ಮಂಗಳೂರು ಜಂಕ್ಷನ್ ರೇಲ್ವೆ ನಿಲ್ದಾಣದ ವೀಕ್ಷಣೆ ಹಾಗೂ 11.00 ರಿಂದ ಮಧ್ಯಾಹ್ನ 02.00 ರ ವರೆಗೆ ಮಂಗಳೂರಿನ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಮಂಗಳೂರು ವ್ಯಾಪ್ತಿಯ ರೇಲ್ವೆ ವಿವಿಧ ಬೇಡಿಕೆಗಳು, ಸಮಸ್ಯೆಗಳು ಹಾಗೂ ಅಭಿವೃದ್ಧಿಯ ವಿಚಾರಗಳ ಕುರಿತು ಸಭೆ ನಡೆಸಲಿದ್ದಾರೆ.

ವಿಶೇಷವಾಗಿ ಕೊಂಕಣ ಭಾಗದಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕರ ಬಹುಕಾಲದ ಬೇಡಿಕೆಯಾದ ಕೊಂಕಣ ರೈಲ್ವೆ ಮತ್ತು ಭಾರತೀಯ ರೈಲ್ವೆಯ ವಿಲೀನ, ಈ ವಿಲೀನದಿಂದ ರೈಲ್ವೆ ಮೂಲಸೌಕರ್ಯಗಳ ಸುಧಾರಣೆ ಮತ್ತು ಪ್ರಯಾಣಿಕರ ಅನುಕೂಲ ಸುಗಮವಾಗಲಿದೆ.

ಮಂಗಳೂರು-ಬೆಂಗಳೂರು ರೈಲ್ವೆ ಮಾರ್ಗದ ಉನ್ನತೀಕರಣ: ಶಿರಾಡಿ ಘಾಟ್ ಭಾಗದ ಕಾರ್ಯಯೋಜನಾ ಅಧ್ಯಯನ ಮತ್ತು ಸುಬ್ರಹ್ಮಣ್ಯ-ಸಕಲೇಶಪುರ ಘಾಟ್ ಭಾಗದ ಸಾಮರ್ಥ್ಯ ವೃದ್ಧಿಯ ಪ್ರಸ್ತಾಪಗಳ ಕುರಿತು ಕರಾವಳಿ ಭಾಗದ ಶಾಸಕರು, ಜನಪ್ರತಿನಿಧಿಗಳು, ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳ ಉಪಸ್ಥಿತಿಯಲ್ಲಿ ಚರ್ಚೆ ನಡೆಯಲಿದೆ.

ಈ ಸಭೆಯು ದಕ್ಷಿಣ ಕನ್ನಡದ ರೈಲ್ವೆ ಪ್ರಯಾಣಿಕರು ಮತ್ತು ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಚರ್ಚಿಸಿ, ಅವುಗಳಿಗೆ ಪರಿಹಾರ ಕೊಂಡುಕೊಳ್ಳುವ ನಿಟ್ಟಿನಲ್ಲಿ ಸಹಕಾರಿಯಾಗಲಿದೆ.

ಈ ಮಹತ್ವದ ಸಭೆಯು ದಕ್ಷಿಣ ಕನ್ನಡದ ರೈಲು ಸೇವೆಗಳ ಸುಧಾರಣೆ ಮತ್ತು ಭವಿಷ್ಯದ ಅಭಿವೃದ್ಧಿಗೆ ಮೈಲುಗಲ್ಲಾಗಲಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English