ಮಂಗಳೂರು : ಮಹಿಳೆಯನ್ನು ಆರ್ಥಿಕವಾಗಿ ಸಶಕ್ತಗೊಳಿಸಲು ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಯೋಜನೆಯನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿಕೊಳ್ಳುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹೇಳಿದ್ದಾರೆ.
ಶನಿವಾರ ಮಂಗಳೂರು ನಗರದ ಉರ್ವಸ್ಟೋರ್ ಬಳಿಯಿರುವ ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ನವೀಕೃತ ಕಟ್ಟಡ ‘ಸಾಹಿತ್ಯ ಸದನ’ ವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡಿದೆ. ಹಾಗಾಗಿ ಗೃಹಲಕ್ಷ್ಮಿ ಸೇರಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳು ನಿತ್ಯ ನಿರಂತರವಾಗಿ ಮುಂದುವರೆಯಲಿವೆ ಎಂದರು.
Click this button or press Ctrl+G to toggle between Kannada and English