ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿ ಸಮಿಪ ಬೃಹತ್ ಗುಡ್ಡ ಕುಸಿದು ಬಿದ್ದು ಏಳು ಜನ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಎನ್ಡಿಆರ್ಎಫ್ ಸಿಬ್ಬಂದಿ ಧಾವಿಸಿದ್ದು, ಕಾರ್ಯಾಚರಣೆ ಪ್ರಗತಿಯಲ್ಲಿದೆ.
ಇದರಲ್ಲಿ ಒಂದೇ ಕಾರಿನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದವರು ಮಣ್ಣಿನಡಿ ಸಿಲುಕಿದ್ದಾರೆ ಎನ್ನಲಾಗಿದೆ. ಒಂದೇ ಕುಟುಂಬದ ಲಕ್ಷ್ಮಣ ಬೊಮ್ಮಯ್ಯ ನಾಯ್ಕ (45), ಶಾಂತಿ ಲಕ್ಷ್ಮಣ ನಾಯ್ಕ (35), ಮೃತ ದೇಹ ಪತ್ತೆ, ಆವಾತಿಕಾ ಲಕ್ಷ್ಮಣ ನಾಯ್ಕ (04), ಉಪೇಂದ್ರ ನಾಯ್ಕ(50), ರೋಷನ್ ಲಕ್ಷ್ಮಣ ನಾಯ್ಕ (10) ಜಗ್ನನಾಥ ನಾಯ್ಕ (50), ಸಣ್ಣಿ ಹನುಮಂತ ಗೌಡ (65) ಸೇರಿದಂತೆ 9 ಮಂದಿ ಮಣ್ಣಿನಡಿ ಸಿಲುಕಿದ್ದಾರೆ. 9 ಜನರಲ್ಲಿ 7 ಮಂದಿ ಮೃಪಟ್ಟಿದ್ದಾರೆ. ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ.
ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿನಲ್ಲಿನ ಗುಡ್ಡದ ಬಳಿ ಟ್ಯಾಂಕರ್ ನಿಲ್ಲಿಸಿ, ಚಾಲಕ ಹಾಗೂ ಕ್ಲೀನರ್ ಅಲ್ಲಿಯೇ ಚಹಾ ಕುಡಿಯುತ್ತಿದ್ದರು. ಈ ವೇಳೆ ಧಿಡೀರನೆ ಬೃಹತ್ ಗುಡ್ಡ ಕುಸಿದಿದೆ. ಗುಡ್ಡ ಕುಸಿತ ರಭಸಕ್ಕೆ ಗ್ಯಾಸ್ ಟ್ಯಾಂಕರ್ ನದಿಗೆ ಬಿದ್ದಿದೆ. ಟ್ಯಾಂಕರ್ ಚಾಲಕ, ಕ್ಲೀನರ್ ಸೇರಿ ಒಂಬತ್ತು ಜನ ನಾಪತ್ತೆಯಾಗಿದ್ದಾರೆ. ಗುಡ್ಡ ಕುಸಿತದಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಜಿಲ್ಲಾಡಳಿತದಿಂದ ಹೆದ್ದಾರಿ ಮೇಲೆನ ಮಣ್ಣಿನ ತೆರವು ಕಾರ್ಯಾಚರಣೆ ಪ್ರಾರಂಭವಾಗಿದೆ.
ಕಾರಿನಲ್ಲಿ ಒಂದು ಕುಟುಂಬ ಹೋಗುತಿತ್ತು. ಹಠಾತ್ ಆಗಿ ಕಾರು ನಿಲ್ಲಿಸಿ ನಿಧಾನಕ್ಕೆ ಹಿಂದೆ ತೆಗೆದುಕೊಳ್ಳುತ್ತಿದ್ದರು. ನಾನು ಹಿಂದಿನ ಗಾಡಿಯಲ್ಲಿ ಇದ್ದೆ. ಇಳಿದು ಬಂದು ನೋಡಿದೆ. ಗುಡ್ಡ ಕುಸಿಯುತ್ತಾ ಇತ್ತು. ದಿಢೀರಾಗಿ ಅಲ್ಲಿಂದ ಬೇರೆ ಕಡೆ ಹಾರಿದೆ. ಸ್ವಲ್ಪದರಲ್ಲೇ ನನ್ನ ಸಾವು ತಪ್ಪಿತ್ತು. ಇಲ್ಲಿ ಒಂದು ಟೀ ಅಂಗಡಿ ಇತ್ತು. ಟಿ ಅಂಗಡಿಯಲ್ಲಿ ನಾಲ್ಕು ಜನ ಇದ್ದರು. ಗ್ಯಾಸ್ ಟ್ಯಾಂಕರ ಕೂಡ ಇಲ್ಲೇ ನಿಲ್ಲಿಸಿದ್ದರು. ಗ್ಯಾಸ್ ಟ್ಯಾಂಕರ್ ಕೆಳಗೆ ನದಿಗೆ ಬಿದ್ದಿದೆ. ಕಾರು ಮತ್ತು ಟೀ ಅಂಗಡಿಯಲ್ಲಿದ್ದವರು ಸೇರಿ ಸುಮಾರು ಒಂಬತ್ತು ಜನ ಮಣ್ಣಿನಡಿ ಸಿಲುಕಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಎಂಬವರು ತಿಳಿಸಿದ್ದಾರೆ.
Click this button or press Ctrl+G to toggle between Kannada and English