ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯದ್ಯಂತ ಮಳೆ ಮುಂದುವರಿದಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಆಗಸ್ಟ್ 02 ರಂದು ಎಲ್ಲಾ ಅಂಗನವಾಡಿ, ಸರಕಾರೀ ಹಾಗೂ ಅನುದಾನಿತ ಶಾಲೆ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಘೋಷಿಸಿದ್ದಾರೆ.
ದುರ್ಭಲ ಶಿಥಿಲ ಕಟ್ಟಡಗಳಲ್ಲಿ ಪಾಠ ಪ್ರವಚನಗಳನ್ನು ಮಾಡದಂತೆ ಶಾಲಾ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ಸಮುದ್ರ ತೀರಕ್ಕೆ ಸಾರ್ವಜನಿಕರು, ವಿದ್ಯಾರ್ಥಿಗಳು ತೆರಳದಂತೆ ಎಚ್ಚರಿಕೆ ನೀಡಲಾಗಿದೆ.
Click this button or press Ctrl+G to toggle between Kannada and English