ಕೆ.ಜೆ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಗಲಭೆ – ಬೋಳಂತೂರು ನಿವಾಸಿಯನ್ನು ಬಂಧಿಸಿದ ಪೊಲೀಸರು

9:29 PM, Thursday, September 22nd, 2022
Share
1 Star2 Stars3 Stars4 Stars5 Stars
(No Ratings Yet)
Loading...

ಬಂಟ್ವಾಳ : ಕೆ.ಜೆ.ಹಳ್ಳಿ ಮತ್ತು ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರು ನಿವಾಸಿಯೋರ್ವನನ್ನು ವಿಟ್ಲ ಮತ್ತು ಬಂಟ್ವಾಳ ಪೊಲೀಸರ ತಂಡ ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆಯ ಸಲುವಾಗಿ ಬೆಂಗಳೂರು ಪೋಲಿಸರಿಗೆ ಒಪ್ಪಿಸಿದ್ದಾರೆ

ಬೊಳಂತೂರು ನಿವಾಸಿ ಮಹಮ್ಮದ್ ಕುಟ್ಟಿ ಅವರ ಪುತ್ರ ಮಹಮ್ಮದ್ ತಪ್ಸೀರ್ ಬಂಧಿತ ಆರೋಪಿ. ಈತನನ್ನು ಬಂಟ್ವಾಳ ಮತ್ತು ವಿಟ್ಲ ಪೋಲೀಸರು ಇಂದು ಸುಮಾರು 11.35ರ ವೇಳೆಗೆ ಆತನ ಮನೆಯಿಂದ ವಶಕ್ಕೆ ಪಡೆದುಕೊಂಡು ಬಂಟ್ವಾಳಕ್ಕೆ ಕರೆ ತಂದಿದ್ದಾರೆ. ಆ ಬಳಿಕ ರಾಜ್ಯ ಪೊಲೀಸರಿಗೆ ಒಪ್ಪಿಸಿದ್ದಾರೆ.

ಕಳೆದ ವರ್ಷ ಬೆಂಗಳೂರಿನ ಕೆ.ಜೆ. ಹಳ್ಳಿ, ಡಿ.ಜೆ.ಹಳ್ಳಿಯಲ್ಲಿ ಅಖಂಡ ಶ್ರೀನಿವಾಸ ಅವರ ಮನೆಗೆ ದಾಂಧಲೆ ನಡೆಸಿ ಅ ಬಳಿಕ ಪೋಲಿಸ್ ಠಾಣೆಗೆ ನುಗ್ಗಲು ಪ್ರಯತ್ನಿಸಿ ಸಾಕಷ್ಟು ಹಾನಿ ಉಂಟು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಪೊಲೀಸರ ತಂಡ ತನಿಖೆ ನಡೆಸುತಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಮ್ಮದ್ ತಪ್ಸೀರ್ ಕೂಡ ಭಾಗಿಯಾಗಿದ್ದ ಎಂಬ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿದೆ.

ಇನ್ನು ಕೆ.ಜೆ.ಹಳ್ಳಿ, ಡಿ.ಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಆರಂಭದಲ್ಲಿ ಯೋಜನೆ ರೂಪಿಸಿದ ತಂಡದ ಜೊತೆಗೆ ಈತ ನಿರಂತರವಾಗಿ ಸಂಪರ್ಕ ಇರಿಸಿಕೊಂಡಿದ್ದ ಎಂಬ ಆರೋಪದ ಹಿನ್ನೆಲೆಯಲ್ಲಿ ಈತನ ಮನೆಗೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English