ಉಡುಪಿ : ಸೋಮವಾರ ಆಗಸ್ಟ್ 5 ರ ಬೆಳಿಗ್ಗೆ ಶಿರ್ವದಿಂದ ಉಡುಪಿಗೆ ಹೋಗುತ್ತಿದ್ದ ‘ನವೀನ್’ ಎಂಬ ಬಸ್ ನಲ್ಲಿ ಯುವತಿಯೊಬ್ಬಳು ಅಸ್ವಸ್ಥಳಾಗಿದ್ದು. ಆಕೆಯನ್ನು ಬಸ್ ಚಾಲಕ, ನಿರ್ವಾಹಕರೇ ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ.
ಬಸ್ಸುಉಡುಪಿಯ ಹಳೆ ತಾಲೂಕು ಕಚೇರಿ ಬಳಿ ತಲುಪಿದಾಗ ಅದರಲ್ಲಿ ಪ್ರಯಾಣಿಸುತ್ತಿದ್ದ ಯುವತಿ ಅಸ್ವಸ್ಥಳಾಗಿದ್ದಾಳೆ. ಬಸ್ ನಲ್ಲೇ ವಾಂತಿ ಮಾಡಿದ ಆಕೆ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಳು. ಕೂಡಲೇ ಬಸ್ ನ ಚಾಲಕ ಶಶಿಕಾಂತ್ ಮತ್ತು ನಿರ್ವಾಹಕ ಸಲೀಂ ಅವರು ಬಸ್ಸನ್ನು ನೇರವಾಗಿ ಹತ್ತಿರದ ಡಾಕ್ಟರ್ ಟಿಎಂಎ ಪೈ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ಕೊಂಡೊಯ್ದು ಆಕೆಗೆ ತುರ್ತು ಪ್ರಥಮ ಚಿಕಿತ್ಸೆ ಲಭಿಸುವಂತೆ ವ್ಯವಸ್ಥೆ ಮಾಡಿದರು. ಯುವತಿಯ ಮನೆಯವರಿಗೆ ಮಾಹಿತಿ ನೀಡಿ ಮನೆಯವರು ಬರುವ ತನಕ ಯುವತಿಗೆ ಚಿಕಿತ್ಸೆ ಒದಗಿಸಲು ಬಸ್ ಸಿಬಂದಿ ಸಹಕಾರ ನೀಡಿದರು ಎನ್ನಲಾಗಿದೆ.
ಇತ್ತೀಚೆಗೆ ಮಂಗಳೂರಿನ ಖಾಸಗಿ ಬಸ್ಸಿನಲ್ಲಿ ಎದೆನೋವು ಕಾಣಿಸಿಕೊಂಡ ವಿದ್ಯಾರ್ಥಿನಿಯನ್ನು ಬಸ್ ಸಿಂಬಂದಿ ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಜೀವ ಉಳಿಸಿ ಮಾನವೀಯತೆ ಮೆರೆದಿದ್ದರು.
Click this button or press Ctrl+G to toggle between Kannada and English