ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರು ಸಮಾಜದಲ್ಲಿ ಹಿಂದೂ-ಮುಸ್ಲಿಂ ಸಮುದಾಯದವರಲ್ಲಿ ಕಂದಕವನ್ನು ಸೃಷ್ಟಿ ಮಾಡಿ ಸಮಾಜದ ನೆಮ್ಮದಿ ಮತ್ತು ಶಾಂತಿಯನ್ನು ಕದಡುವಂತೆ ಪ್ರೇರೇಪಿಸುತ್ತಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.
ಬೆಳ್ತಂಗಡಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಮಹಾತ್ಮ ಗಾಂಧೀಜಿಯ ಕುರಿತು ಅವಮಾನದ ರೀತಿಯಲ್ಲಿ ಭಾಷಣ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ತಾಲೂಕು ಆಡಳಿತದಿಂದ ಆಡಳಿತ ಸೌಧದ ಮುಂಭಾಗದಲ್ಲಿ ಸ್ವಾತಂತ್ರೋತ್ಸವದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸದರಿ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅಧ್ಯಕ್ಷ ಭಾಷಣದಲ್ಲಿ ಈ ದೇಶಕ್ಕೆ ಕೇವಲ ಶಾಂತಿಯಿಂದ, ಕೇವಲ ಚರಕ ತಿರುಗಿಸಿದರಿಂದ ಸ್ವಾತಂತ್ರ್ಯ ಬಂದಿಲ್ಲ ಎಂದು ಹೇಳಿದ್ದಾರೆ ಎಂದು ದೂರು ನೀಡಲಾಗಿದೆ
ಶಾಸಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ಮತ್ತು ಸಿಪಿಐಎಮ್ ಮುಖಂಡ ಬಿ.ಎಮ್ ಭಟ್ ಭಾರತೀಯ ದೂರು ನೀಡಿದರು.
Click this button or press Ctrl+G to toggle between Kannada and English