`ಬಿ‌.ಸಿ.ರೋಡ್ ಚಲೋ’ ಪ್ರತಿಭಟನೆಯಲ್ಲಿ ಪಾಲ್ಗೊಂಡ ಸಾವಿರಾರು ಕಾರ್ಯಕರ್ತರು

5:44 PM, Monday, September 16th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಬಂಟ್ವಾಳ : ವಿ.ಎಚ್.ಪಿ ಮತ್ತು ಭಜರಂಗದಳದ ಸಾವಿರಾರು ಕಾರ್ಯಕರ್ತರು ಬಿಸಿರೋಡಿನ ರಕ್ತೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಸೋಮವಾರ ಬೆಳಿಗ್ಗೆ `ಬಿ‌.ಸಿ.ರೋಡ್ ಚಲೋ’ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ರಕ್ತೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ ಕಾರ್ಯಕರ್ತರು ಘೋಷಣೆ ಕೂಗೂತ್ತಾ ಪೋಲೀಸರು ಹಾಕಿದ ಬ್ಯಾರಿಕೇಡ್ ಗಳನ್ನ ಲೆಕ್ಕಿಸದೆ ಮುಂದೆ ಸಾಗಿದರು. ಈ ವೇಳೆ ಪೋಲೀಸರು ಹಾಗೂ ಕಾರ್ಯಕರ್ತರ ನಡುವೆ ನೂಕಾಟ ತಳ್ಳಾಟ ನಡೆಯಿತು. ಪರಿಸ್ಥಿತಿ ಕೈ ಮೀರಿಹೋಗುವ ಹಂತಕ್ಕೆ ತಲುಪಿದಾಗ ಪೋಲೀಸರು ಬಸ್ ಗಳನ್ನು ರಸ್ತೆಗೆ ಅಡ್ಡಲಾಗಿ ಇಟ್ಟು ಕಾರ್ಯಕರ್ತರಿಗೆ ತಡೆಯೊಡ್ಡಿದರು.

ಬಳಿಕ ಹೆದ್ದಾರಿಯಲ್ಲಿ ಕೆಲಹೊತ್ತು ಕಾರ್ಯಕರ್ತರು ಘೋಷಣೆ ಕೂಗಿದರು. ಶರಣ್ ಪಂಪ್ ವೆಲ್ಅವರಿಗೆ ಸವಾಲು ಹಾಕಿರುವ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಅವರ ವಿರುದ್ದ ಘೋಷಣೆ ಕೂಗಿದರು.

ಬಿಸಿರೋಡಿನ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಅವರ ಸವಾಲು ಸ್ವೀಕರಿಸಿ ಬಿಸಿರೋಡಿಗೆ ಬಂದಿದ್ದೇನೆ. ಇನ್ನೂ ಮುಂದೆಯೂ ಇಂತಹ ಸವಾಲು ಸ್ವೀಕರಿಸಲು ತಯಾರಾಗಿದ್ದೇವೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿ ಜನ ಸೇರುವ ಮೂಲಕ ಹಿಂದುತ್ವಕ್ಕೆ ಜಯಸಿಕ್ಕಿದೆ. ಇಂತಹ ಸವಾಲುಗಳು ಹಿಂದೂ ಕಾರ್ಯಕರ್ತರಿಗೆ ಇದೇ ಮೊದಲಲ್ಲ,ಸಾಕಷ್ಟು ಕಾರ್ಯಕರ್ತರು ಪ್ರಾಣವನ್ನು ಕೊಟ್ಟಿದ್ದಾರೆ,ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.ಜೊತೆಗೆ ಜೈಲಿಗೂ ಹೋಗಿದ್ದಾರೆ.ನಾಗಮಂಗಲದ ಗಣೇಶ ಚತುರ್ಥಿಯ ಮೆರವಣಿಗೆ ಸಂದರ್ಭದಲ್ಲಿ ಕಿಡಿಗೇಡಿಗಳು ಹಿಂಸೆ ಎಬ್ಬಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಹೇಳಿಕೆಯನ್ನು ಕೊಟ್ಟಿದ್ದೇವೆ.ಆದರೆ ಆತ ಅದಕ್ಕೆ ಬಿಸಿರೋಡಿಗೆ ಆಗಮಿಸುವಂತೆ ಸವಾಲು ಹಾಕಿದ್ದ. ಆತನ ಸವಾಲಿಗೆ ಉತ್ತರವಾಗಿ ನಾವು ಇಂದು ಬಿಸಿರೋಡಿನಲ್ಲಿ ಸೇರಿದ್ದೇವೆ. ಮುಂದೆ ಅವಶ್ಯಕತೆ ಬಿದ್ದರೆ ಆತ ಹೇಳಿದಂತೆ ಮಸೀದಿಗೆ ಹೋಗುವುದಕ್ಕೂ ಸಿದ್ದರಿದ್ದೇವೆ. ಇದು ಶರಣ್ ಒಬ್ಬನಿ್ಗೆ ಹಾಕಿದ ಸಾವಲು ಅಲ್ಲ‌ ಇಡೀ ಹಿಂದೂ ಕಾರ್ಯಕರ್ತರಿಗೆ ಹಾಕಿದ ಸವಾಲು ಎಂದು ಅವರು ತಿಳಿಸಿದರು.ಯಾರಿಗೂ ಆಹ್ವಾನ ನೀಡದೆ ತಾವೆಲ್ಲರೂ ಆಗಮಿಸಿದ್ದಕ್ಕೆ ಧನ್ಯವಾದ ಸಮರ್ಪಿಸುತ್ತಿದ್ದೇನೆ ಎಂದು ಹೇಳಿದರು.

ಸವಾಲಿಗೆ ಪ್ರತಿ ಸವಾಲು ಹಾಕಿದ್ದ ಹಿಂದೂ ಸಂಘಟನೆಯ ಪ್ರಮುಖ ಪುನೀತ್ ಅತ್ತಾವರ ಕೂಡ ಬಿಸಿರೋಡಿನ ಚಲೋ ಕಾರ್ಯಕ್ರಮದಲ್ಲಿ ಶರಣ್ ಪಂಪ್ ವೆಲ್ ಜೊತೆ ಆಗಮಿಸಿದ್ದರು.

ಐಜಿಪಿ ಅಮಿತ್ ಸಿಂಗ್,ಎಸ್.ಪಿ.ಯತೀಶ್ ಎನ್.ಎ.ಸಿ.ಹರ್ಷವರ್ದನ್, ತಹಶಿಲ್ದಾರ್ ಅರ್ಚನಾ ಭಟ್ ಅವರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು ಬಿ.ಸಿ.ರೋಡ್ ನಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು‌ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿತ್ತು.

ಹಿಂದೂ ಸಂಘಟನೆಯ ಪ್ರಮುಖರಾದ ಪ್ರಸಾದ್ ಕುಮಾರ್ ರೈ ಬಂಟ್ವಾಳ, ಭಾಸ್ಕರ್ ಧರ್ಮಸ್ಥಳ, ನವೀನ್ ನೆರಿಯಾ, ಭುಜಂಗ ಕುಲಾಲ್, ಗುರುರಾಜ್ ಬಂಟ್ವಾಳ, ನರಸಿಂಹ ಮಹೇಶ್ ಬೈಲೂರು, ಕೃಷ್ಣಪ್ರಸಾದ್, ಮಿಥುನ್ ಕಲ್ಲಡ್ಜ, ನವೀನ್ ಮೂಡುಶೆಡ್ಡೆ, ಸಚಿನ್ ಮೆಲ್ಕಾರ್, ಚೆನ್ನಪ್ಪ ಕೋಟ್ಯಾನ್, ದಿನೇಶ್ ಅಮ್ಟೂರು,ಸಂದೇಶ್ ಶೆಟ್ಟಿ ಅರೆಬೆಟ್ಟು, ಗೋವಿಂದ ಪ್ರಭು, ಪುರುಷೋತ್ತಮ ಸಾಲಿಯಾನ್, ರಾಮ್ ದಾಸ್ ಬಂಟ್ವಾಳ ಮತ್ತಿತರ ಪ್ರಮುಖರು ಹಾಜರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English