ಬೆಳ್ತಂಗಡಿಯ ರೆಖ್ಯಕ್ಕೆ ಭೇಟಿ ನೀಡಿ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಸಂಸದ ಕ್ಯಾ. ಚೌಟ

12:08 AM, Wednesday, September 18th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಬೆಳ್ತಂಗಡಿ : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಬೆಳ್ತಂಗಡಿ ತಾಲೂಕಿನ ರೆಖ್ಯಕ್ಕೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾಗೂ ಎಂಜಿರದಲ್ಲಿ ಸರ್ವೀಸ್‌ ರಸ್ತೆ ಕಾಮಗಾರಿಗಳ ವೀಕ್ಷಣೆ ಮಾಡಿ ಸದ್ಯದ ಪ್ರಗತಿ ಬಗ್ಗೆ ಮಾಹಿತಿ ಪಡೆದುಕೊಂಡ ಸಂಸದರು, ರಸ್ತೆ ಕಾಮಗಾರಿಗಳಿಂದಾಗಿ ಸಾರ್ವಜನಿಕರಿಗೆ ಯಾವುದೇ ರೀತಿಯಿಂದ ತೊಂದರೆಯಾಗಬಾರದು. ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಮಗಾರಿಯನ್ನು ತ್ವರಿತವಾಗಿ ಮುಂದುವರಿಸಬೇಕೆಂದು ಗುತ್ತಿಗೆದಾರರಿಗೆ ಸೂಚಿಸಿದ್ದಾರೆ.

ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ, ಅರಸಿನಮಕ್ಕಿ ಗ್ರಾ.ಪಂ. ಮಾಜಿ ಅಧ್ಯಕ್ಷ ನವೀನ್‌ ರೆಖ್ಯ, ಬಜರಂಗದಳ ಜಿಲ್ಲಾ ಕಾರ್ಯದರ್ಶಿ ನವೀನ್‌ ನೆರಿಯ, ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ನಿಕಟಪೂರ್ವ ಕಾರ್ಯದರ್ಶಿ ಕರುಣಾಕರ ಶಿಶಿಲ ಮುಂತಾದವರು ಭೇಟಿ ವೇಳೆ ಹಾಜರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English