ಕರ್ನಾಟಕದ ಎಲ್ಲಾ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಬಳಸಲು ಸುತ್ತೋಲೆ

11:08 PM, Friday, September 20th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಬೆಂಗಳೂರು: ಕರ್ನಾಟಕ ಸರ್ಕಾರ ಎಲ್ಲಾ ದೇವಸ್ಥಾನಗಳಲ್ಲಿ ಪ್ರಸಾದ ತಯಾರಿಕೆಗೆ ಶುದ್ಧ ನಂದಿನಿ ತುಪ್ಪವನ್ನು ಬಳಸುವಂತೆ ಸುತ್ತೋಲೆ ಹೊರಡಿಸಿದೆ. ಹಿಂದೂ ಧಾರ್ಮಿಕ ದತ್ತಿ ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ.

ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ ಮತ್ತು ಪ್ರಸಾದ ತಯಾರಿಕೆಗೆ ಶುದ್ದ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸೂಚಿಸಲಾಗಿದೆ. ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲ ವಿಧದ ಪ್ರಸಾದ ತಯಾರಿಕೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸೂಚಿಸಿದ್ದಾರೆ. ಹಾಗೆಯೇ ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಪಾಡಿಕೊಳ್ಳುವಂತೆಯೂ ಸೂಚನೆ ನೀಡಲಾಗಿದೆ.

ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಧಾರ್ಮಿ ದತ್ತಿ ಇಲಾಖೆಯ ಸಹಾಯಕ ಆಯುಕ್ತರು, ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಸುತ್ತೋಲೆ ಪ್ರತಿಯನ್ನು ಕಳುಹಿಸಲಾಗಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ತಿರುಪತಿಗೆ ರಾಜ್ಯದ ನಂದಿನಿ ತುಪ್ಪ ಸರಬರಾಜಾಗುತ್ತಿಲ್ಲ. ಈ ಟೆಂಡರ್‌ ಖಾಸಗಿ ಕಂಪನಿಗಳ ಪಾಲಾಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English