ಕಾರ್ಮಿಕರ ಮುಷ್ಕರದ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲಾಗುತ್ತಿದೆ : ಸೀತಾರಾಮ ಬೇರಿಂಜ

11:25 PM, Monday, September 23rd, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ಬಿಜೆಪಿ ನೇತ್ರತ್ವದ NDA ಸರಕಾರ ಜಾರಿಗೆ ತಂದಿರುವ 4 ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಕೂಡಲೇ ಹಿಂಪಡೆಯುವಂತೆ ಕೇಂದ್ರ ಕಾರ್ಮಿಕ ಸಂಘಟನೆಗಳು ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು( 23-09-2024) ಮಂಗಳೂರಿನ ಕ್ಲಾಕ್ ಟವರ್ ಬಳಿಯಲ್ಲಿ JCTU ನೇತ್ರತ್ವದಲ್ಲಿ ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು_

ಕಾರ್ಪೊರೇಟ್ ಕಂಪೆನಿಗಳ ಹಿತ ಕಾಯುವ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶಭರಿತವಾಗಿ ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ AITUC ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೀತಾರಾಮ ಬೇರಿಂಜರವರು ಮಾತನಾಡಿ, ಕೈಗಾರಿಕಾ ಸಂಬಂಧ ಕಾಯ್ದೆಯು ಕಾರ್ಮಿಕ ಸಂಘಗಳ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳುತ್ತಿದೆ. ವಾರ್ಷಿಕ ರಿಟರ್ನ್ಸ್ ಸಲ್ಲಿಸುವಲ್ಲಿ ಕಾರ್ಮಿಕ ಸಂಘಗಳು ವಿಳಂಬ ಮಾಡಿದರೆ ಸಂಘದ ನೋಂದಣಿಯನ್ನು ರದ್ದು ಅಥವಾ ಭಾರೀ ದಂಡ ವಿಧಿಸುವ ಮೂಲಕ ಸಂಘಗಳ ಅಸ್ತಿತ್ವಕ್ಕೆ ದಕ್ಕೆ ತರುವ ಕೆಲಸ ಮಾಡುತ್ತಿದೆ. ಕಾರ್ಮಿಕರ ಮುಷ್ಕರದ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲಾಗುತ್ತಿದೆ ಎಂದು ಹೇಳಿದರು

ಪ್ರಾಸ್ತಾವಿಕವಾಗಿ ಮಾತನಾಡಿದ CITU ಜಿಲ್ಲಾ ಪ್ರದಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಕಾರ್ಮಿಕ ವಿರೋಧಿಯಾದ 4 ಸಂಹಿತೆಗಳ ವಿಚಾರಗಳನ್ನು ಎಳೆಎಳೆಯಾಗಿ ಬಿಡಿಸಿ ಹೇಳುತ್ತಾ, ಈ ಸಂಹಿತೆಯು ಅಂತರಾಷ್ಟ್ರೀಯ ನಿಯಮಗಳನ್ನು ಉಲ್ಲಂಘಿಸಿ ದುಡಿಮೆಯ ಅವಧಿಯನ್ನು 8 ಗಂಟೆಯಿಂದ 12 ಗಂಟೆಗೆ ಹೆಚ್ಚಿಸಲು ಅನುಮತಿ ನೀಡಿದೆ.ವೇತನ ಕಾಯಿದೆಯು ಕನಿಷ್ಠ ಚೇತನ ಪರಿಕಲ್ಪನೆಯನ್ನೇ ದುರ್ಬಲಗೊಳಿಸುತ್ತಿದೆ* ಎಂದು ಹೇಳಿದರು.

ಪ್ರತಿಭಟನೆಯನ್ನುದ್ದೇಶಿಸಿ CITU ಜಿಲ್ಲಾ ನಾಯಕರಾದ ವಸಂತ ಆಚಾರಿ,ಬ್ಯಾಂಕ್ ಅಧಿಕಾರಿಗಳ ಸಂಘಟನೆಯ ರಾಜ್ಯ ನಾಯಕರಾದ ಸುರೇಶ್ ಹೆಗ್ಡೆ,ಬ್ಯಾಂಕ್ ನೌಕರರ ಸಂಘಟನೆಯ ರಾಜ್ಯ ನಾಯಕರಾದ ಕೆ ಫಣೀಂದ್ರ, AITUC ಜಿಲ್ಲಾ ನಾಯಕರಾದ ಸುರೇಶ್ ಕುಮಾರ್ ರವರು ಮಾತನಾಡಿ,NDA ನೇತ್ರತ್ವದ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿವರಿಸುತ್ತಾ ಕಾರ್ಪೊರೇಟ್ ಕಂಪನಿಗಳ ಹಿತ ಕಾಯುವ ಸರಕಾರದ ವಿರುದ್ಧ ಪ್ರಬಲ ಜನಾಂದೋಲನ ಬೆಳೆದು ಬರಬೇಕೆಂದು ಕರೆ ನೀಡಿದರು.

ಪ್ರತಿಭಟನೆಯಲ್ಲಿ CITU ಜಿಲ್ಲಾ ನಾಯಕರಾದ ಸುಕುಮಾರ್ ತೊಕ್ಕೋಟ್ಟು, ಜಯಂತ ನಾಯಕ್, ನೋಣಯ್ಯ ಗೌಡ,ಬಿ ಕೆ ಇನ್ತಿಯಾಜ್, ಚಂದ್ರಹಾಸ, ರಾಧಾ ಮೂಡಬಿದ್ರೆ, ಲೋಲಾಕ್ಷಿ, ಸುಂದರ ಕುಂಪಲ,ಭಾರತಿ ಬೋಳಾರ,ಜಯಲಕ್ಷ್ಮಿ, ರೋಹಿದಾಸ್,ವಿಲಾಸಿನಿ, ಕ್ರಷ್ಣಪ್ಪ,ಲಕ್ಷ್ಮೀ,AITUC ಜಿಲ್ಲಾ ನಾಯಕರಾದ ಬಿ ಶೇಖರ್, ವಿ ,ಕರುಣಾಕರ್, ಪುಷ್ಪಾರಾಜ್ ಬೋಳೂರು, ಪ್ರವೀಣ್ ಕುಮಾರ್, ಸುಲೋಚನಾ, ಕುಸುಮ,ರೈತ ನಾಯಕರಾದ ಸದಾಶಿವದಾಸ್, ಯುವಜನ ಮುಖಂಡರಾದ ನವೀನ್ ಕೊಂಚಾಡಿ,ರಿಜ್ವಾನ್ ಹರೇಕಳ,ಜಗದೀಶ್ ಬಜಾಲ್ ಮುಂತಾದವರು ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English