ಜಿಲ್ಲೆಯ ಕ್ರೀಡಾಪಟುಗಳ ಸಾಧನೆ ಶ್ಲಾಘನೀಯ : ಜಿಲ್ಲಾಧಿಕಾರಿ

9:25 PM, Thursday, September 26th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕ್ರೀಡಾಪಟುಗಳು ದೇಶದ ವಿವಿಧ ಕ್ರೀಡಾಕೂಟಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವುದು ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಮೆಚ್ಚುಗೆ ವ್ಯಕ್ತಪಡಿಸಿದರು.

ಅವರು ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ, ನೆಹರು ಯುವ ಕೇಂದ್ರ ಹಾಗೂ ಜಿಲ್ಲಾ ಯುವಜನ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಮಂಗಳ ಕ್ರೀಡಾಂಗಣದಲ್ಲಿ ನಡೆದ ಮಂಗಳ ಕ್ರೀಡಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಹಲವು ಕ್ರೀಡಾಕೂಟಗಳಲ್ಲಿ ಜಿಲ್ಲೆಯ ಕ್ರೀಡಾಪಟುಗಳು ಭಾಗವಹಿಸಿ ಪದಕಗಳನ್ನು ಗೆಲ್ಲುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕ್ರೀಡಾಪಟುಗಳು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಉತ್ತಮ ಸೌಲಭ್ಯಗಳು ಜಿಲ್ಲೆಯಲ್ಲಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸಿಎಲ್, ನೆಹರು ಯುವ ಕೇಂದ್ರ ಆಡಳಿತಾಧಿಕಾರಿ ಜಗದೀಶ್ ಕೆ, ಜಿಲ್ಲಾ ಯುವಜನ ಒಕ್ಕೂಟ ಅಧ್ಯಕ್ಷ ಸುರೇಶ್ ಸೂಡಿ ಮುಳ್ಳು, ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷ ಡಿ.ಎಂ ಅಸ್ಲಂ ದೈಹಿಕ ಶಿಕ್ಷಕ ಪರಿವೀಕ್ಷಣಾಧಿಕಾರಿ ಭರತ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜಾ ಸ್ವಾಗತಿಸಿದರು. ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ವಿಜೇತರಾದವರು ಇಂದು ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English