ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಚೈತ್ರಾ ಕುಂದಾಪುರ ಈ ಬಾರಿ ಬಿಗ್ ಬಾಸ್ ಸೀಸನ್ 11 ರ ಮೂರನೆ ಸ್ಪರ್ಧಿ

12:28 AM, Sunday, September 29th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : 2023ರ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಉದ್ಯಮಿ ಗೋವಿಂದ ಪೂಜಾರಿ ಅವರಿಗೆ ಟಿಕೆಟ್ ಕೊಡಿಸುತ್ತೇವೆ ಎಂದು ಹೇಳಿ ತನ್ನ ಸಹವರ್ತಿಗಳೊಂದಿಗೆ ಕೋಟಿ ಕೋಟಿ ವಸೂಲಿ ಮಾಡಿದ್ದರು ಎಂಬ ಆರೋಪದಲ್ಲಿ ಜೈಲು ಸೇರಿದ್ದ ಚೈತ್ರಾ ಕುಂದಾಪುರ ಈ ಬಾರಿ ಬಿಗ್ ಬಾಸ್ ಸೀಸನ್ 11 ರ ಮೂರನೆ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ತೆರಳಲಿದ್ದಾರಂತೆ.

ಕರಾವಳಿಯಲ್ಲಿ ಕೇಳಿ ಬಂದ ಲವ್ ಜಿಹಾದ್ ಪ್ರಕರಣಗಳ ವಿರುದ್ಧ ಚೈತ್ರಾ ಕುಂದಾಪುರ ಹೋರಾಡಿದ್ದರು. ಚೈತ್ರಾ ಕುಂದಾಪುರ ಬರೆದ ‘ಪ್ರೇಮಪಾಶ’ ಕೃತಿ ವಿವಾದ ಸೃಷ್ಟಿಸಿತ್ತು. ಹಿಜಾಬ್ ವಿವಾದದಲ್ಲೂ ಚೈತ್ರಾ ಕುಂದಾಪುರ ಸದ್ದು ಮಾಡಿದ್ದರು. ಗೋ ಹತ್ಯೆ ವಿರುದ್ಧ ಚೈತ್ರಾ ಕುಂದಾಪುರ ದನಿಯೆತ್ತಿದ್ದರು.

ಕಾಲೇಜಿನಲ್ಲಿ ಓದುವಾಗಲೇ ಎಬಿವಿಪಿ ಸಂಘಟನೆಯಲ್ಲಿ ಚೈತ್ರಾ ಕುಂದಾಪುರ ಸಕ್ರಿಯರಾಗಿದ್ದರು. ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯೆಯಾಗಿದ್ದರು. . ಹಿಂದುತ್ವದ ವಿಚಾರಧಾರೆಗಳನ್ನ ಜನರಿಗೆ ಮುಟ್ಟುವ ಹಾಗೆ, ಕೆರಳಿಸುವ ಹಾಗೆ, ಪ್ರಚೋದನಾಕಾರಿ ಭಾಷಣ ಮಾಡುತ್ತಿದ್ದರು.

ಉಡುಪಿಯ ಅಜ್ಜರಕಾಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿಯೂ ಚೈತ್ರಾ ಕುಂದಾಪುರ ಕೆಲಸ ಮಾಡಿದ್ದರು. ಇವರಿಗೆ ಯುವ ಮಾಧ್ಯಮ ಪ್ರಶಸ್ತಿಯೂ ಲಭಿಸಿತ್ತು.

ಕುಂದಾಪುರದಲ್ಲಿ ಪಿಯುಸಿವರೆಗೆ ವ್ಯಾಸಂಗ ಮಾಡಿದ ಚೈತ್ರಾ, ಕೊಣಾಜೆಯಲ್ಲಿ ಪದವಿ ಪೂರ್ಣಗೊಳಿಸಿದರು. ಮಂಗಳೂರು ವಿಶ್ವ ವಿದ್ಯಾಲಯದ ಪದವೀಧರೆಯಾದ ಚೈತ್ರಾ ಕುಂದಾಪುರ, ಕೆಲ ಕಾಲ ಬೆಂಗಳೂರಿನಲ್ಲಿ ಖಾಸಗಿ ವಾಹಿನಿಯಲ್ಲಿ ಕೆಲಸ ಮಾಡಿದ್ದರು.​ ಉಡುಪಿಯ ಸ್ಪಂದನ ಟಿವಿಯ ನಿರೂಪಕಿಯಾಗಿದ್ದರು ಕಾಲೇಜು ದಿನಗಳಿಂದಲೇ ಎಬಿವಿಪಿ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಪತ್ರಕರ್ತೆಯಾಗಿ, ನಿರೂಪಕಿಯಾಗಿ ಭಾಷಣಕಾರರಾಗಿ ಗಮನ ಸೆಳೆದಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English