ವಿಧಾನ ಪರಿಷತ್‌ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

12:42 AM, Wednesday, October 2nd, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ , ಯುವ ನಾಯಕ ಕಿಶೋರ್ ಕುಮಾರ್ ಪುತ್ತೂರು ಸ್ಪರ್ಧಿಸಲಿದ್ದಾರೆ. ಬಿಜೆಪಿ ಹೈ ಕಮಾಂಡ್ ಈ ಬಗ್ಗೆ ಅಂತಿಮ ನಿರ್ಧಾರ ಪ್ರಕಟಿಸಿದೆ.

ಪುತ್ತೂರಿನ ಸರ್ವೆಯ ಬೊಟ್ಯಾಡಿಯ ನಿವಾಸಿಯಾದ ಕಿಶೋರ್ ಕುಮಾರ್ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ , ಯುವ ನಾಯಕ ಕಿಶೋರ್ ಕುಮಾರ್ ಪುತ್ತೂರು ಸ್ಪರ್ಧಿಸಲಿದ್ದು , ಅವಿಭಜಿತ ದ.ಕ.ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಅಭೂತಪೂರ್ವ ಗೆಲುವಿಗೆ ಸಹಕರಿಸಬೇಕೆಂದು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ವಿನಂತಿಸಿದ್ದಾರೆ.

ಪಕ್ಷ ಯುವಕರಿಗೆ ಆದ್ಯತೆ ನೀಡಿದ್ದು, ಆರ್‌ಎಸ್‌ಎಸ್ ಸ್ವಯಂಸೇವಕ ಕಿಶೋರ್ ಕುಮಾರ್ ಪುತ್ತೂರು ಅವರು ಅಭಾವಿಪ ನಾಯಕನಾಗಿ, ಯುವ ಮೋರ್ಚಾದ ಜಿಲ್ಲಾಧ್ಯಕ್ಷರಾಗಿ ಪಕ್ಷ ಸಂಘಟನೆಗೆ ದುಡಿದವರು. ಬಿಜೆಪಿಯ ರಾಜ್ಯ, ರಾಷ್ಟ್ರ ಮಟ್ಗಟದ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡವರು.

ದ.ಕ.ಮತ್ತು ಉಡುಪಿ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಬಿಜೆಪಿ ಪ್ರಾಬಲ್ಯವಿದ್ದು, ಕಿಶೋರ್ ಕುಮಾರ್ ಅವರು ಅತ್ಯಧಿಕ ಮತಗಳಿಂದ ಜಯ ಸಾಧಿಸುವುದು ನಿಶ್ಚಿತ ಎಂದು ನಳಿನ್‌ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English