ಮಂಗಳೂರು : ಖಾಸಗಿ ಬಸ್ ಕಂಡಕ್ಟರ್ ಒಬ್ಬರನ್ನು ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಸ್ಟೇಟ್‌ಬ್ಯಾಂಕ್ ಬಳಿ ಇರುವ ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ನಡೆದಿದೆ.
ಮಂಗಳೂರು-ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್‌ನಲ್ಲಿ ನಿರ್ವಾಹಕರಾಗಿದ್ದ ರಾಜೇಶ್ (30) ಮೃತಪಟ್ಟವರು.
ಸ್ಟೇಟ್‌ಬ್ಯಾಂಕ್, ಲೇಡಿಗೊಶನ್ ಗಾಂಜಾ, ದರೋಡೆ, ಪಿಕ್ ಪಾಕೆಟ್ ಗೆ ಹೆಸರುವಾಸಿಯಾಗಿದ್ದು ಲೂಟಿ ಮಾಡುವ ಸಂದರ್ಭ ಪ್ರತಿರೋಧ ಒಡ್ಡಿರುವುದಕ್ಕೆ ದುಷ್ಕರ್ಮಿಗಳು ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ರಾಜೇಶ್ ಸಂಬಂಧಿಕರು ಯಾರೆಂದು ಸಹೋದ್ಯೋಗಿಗಳಿಗೆ ತಿಳಿದಿಲ್ಲ. ಪ್ರತಿ ವರ್ಷವೂ ಮಾಲೆ ಧರಿಸಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಹೋಗುತ್ತಿದ್ದ ರಾಜೇಶ್ ಸರಳ ಸ್ವಭಾವದವನಾಗಿದ್ದ. ಎಲ್ಲರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ಎಂದು ಅವರು ತಿಳಿಸಿದ್ದಾರೆ.
ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿದ ಪರಿಣಾಮ ಮೃತದೇಹ ಜರ್ಝರಿತವಾಗಿತ್ತು. ಪಾಂಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ವೆನ್‌ಲಾಕ್ ಶವಾಗಾರದಲ್ಲಿರಿಸಲಾಗಿದೆ.
Click this button or press Ctrl+G to toggle between Kannada and English