ಉಪ್ಪಿನಂಗಡಿ : ಮಗನ ಬರ್ತಡೇಗಾಗಿ ರಕ್ಷಿಣಾರಣ್ಯದಿಂದ ಕಡವೆಯನ್ನು ಗುಂಡಿಕ್ಕಿ ಕೊಂದು ಅದರ ಮಾಂಸವನ್ನು ಫ್ರಿಡ್ಜ್ ನಲ್ಲಿ ಇರಿಸಲಾಗಿದ್ದ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಶಿರಾಡಿ ಗ್ರಾಮದ ಗುಂಡ್ಯ ನಿವಾಸಿ ಸುರೇಶ್ ಮತ್ತವರ ಸಹವರ್ತಿಗಳು ರಕ್ಷಿತಾರಣ್ಯದಲ್ಲಿದ್ದ ಕಡವೆಯೊಂದಕ್ಕೆ ಗುಂಡಿಕ್ಕಿ ಹತ್ಯೆಗೈದಿದ್ದರು ಎಂದು ಹೇಳಲಾಗಿದೆ. ಅದನ್ನು ಮಗನ ಹುಟ್ಟು ಹಬ್ಬದ ಔತಣ ಕೂಟಕ್ಕೆಂದು ಮಾಂಸ ಮಾಡಿ ಮನೆಯ ಪ್ರೀಝರ್‌ನಲ್ಲಿ ಇರಿಸಿದ್ದರು.
ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿ ವಲಯ ಅರಣ್ಯಾಧಿ ಕಾರಿಗಳ ನಿರ್ದೇಶನದ ಮೇರೆಗೆ ಉಪ ವಲಯ ಅರಣ್ಯಾಧಿಕಾರಿ ಯತೀಂದ್ರ ಇಲಾಖಾ ಸಿಬಂದಿ ಸುನಿಲ್, ಶಿವಾನಂದ ಅವರ ತಂಡ ಸುರೇಶ್ ಮನೆಗೆ ದಾಳಿ ನಡೆಸಿ ಸಂಗ್ರಹಿಸಿಟ್ಟ ಮಾಂಸ ಹಾಗೂ ಹತ್ಯೆಗೆ ಬಳಸಲಾದ ಕೋವಿಯನ್ನು ವಶಪಡಿಸಿಕೊಂಡು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಕಾರ್ಯಾಚರಣೆ ವೇಳೆ ಆರೋಪಿಗಳು ಗುಂಡ್ಯ ಹೊಳೆಯನ್ನು ಈಜಿ ದಾಟುವ ಮೂಲಕ ಪರಾರಿಯಾಗಿದ್ದಾರೆ. ವಲಯಾಧಿಕಾರಿಯಿಂದ ತನಿಖೆ ಉಪ್ಪಿನಂಗಡಿ ವಲಯ ಅರಣ್ಯಾಧಿ ಕಾರಿ ರಾಘವೇಂದ್ರ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಹತ್ಯೆಗೆ ಬಳಸಲಾದ ಕೋವಿ ಮತ್ತು ಕಡವೆ ಮಾಂಸವನ್ನು ಸ್ವಾಧೀನಪಡಿಸಿಕೊಂಡಿದೆ.
Click this button or press Ctrl+G to toggle between Kannada and English