ಅಕ್ಟೊಬರ್ 24, ವಿಧಾನಪರಿಷತ್ ಚುನಾವಣೆ ಮತಗಳ ಎಣಿಕೆ : ಫಲಿತಾಂಶ ವಿಳಂಭ ಸಾಧ್ಯತೆ

10:08 PM, Wednesday, October 23rd, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ವಿಧಾನಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ಉಪಚುನಾವಣೆಯ ಮತಗಳ ಎಣಿಕೆ ಗುರುವಾರ ನಡೆಯಲಿದೆ. ನಗರದ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಲಾಗಿದೆ.

ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮತ ಎಣಿಕೆಗೆ ಒಂದು ಕೊಠಡಿ ವ್ಯವಸ್ಥೆ ಮಾಡಲಾಗಿದ್ದು 12 ಮೇಜುಗಳಲ್ಲಿ ಎಣಿಕೆ ನಡೆಯಲಿದೆ. ಪ್ರತಿ ಮೇಜಿಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬರು ಸಹಾಯಕರು ಮತ್ತು ಒಬ್ಬರು “ಡಿ” ಗ್ರೂಪ್ ಸಿಬ್ಬಂದಿ ಇರಲಿದ್ದಾರೆ. ಒಟ್ಟು 392 ಮತ ಪೆಟ್ಟಿಗೆಗಳನ್ನು ಪ್ರತಿ ಟೇಬಲ್ ಗೆ 33 ರಂತೆ ಮತಪೆಟ್ಟಿಗೆಗಳನ್ನು ಹಂಚಿಕೆ ಮಾಡಲಾಗುತ್ತದೆ.

ಮೊದಲು ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಮಿಶ್ರಣ ಕಾರ್ಯ, ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಿ ನಂತರ ಒಂದನೇ ಪ್ರಾಶಸ್ತ್ಯದ ಮತಗಳ ಎಣಿಕೆ ಮಾಡಲಾಗುತ್ತದೆ.

ನಿಗದಿತ ಕೋಟವನ್ನು ಮೊದಲ ಪ್ರಾಶಸ್ತ್ಯದಲ್ಲಿ ಪಡೆದ ಅಭ್ಯರ್ಥಿಯ ಆಯ್ಕೆ ಘೋಷಿಸಲಾಗುವುದು. ಯಾವುದೇ ಅಭ್ಯರ್ಥಿ ನಿಗದಿತ ಕೋಟಾ ತಲುಪದಿದ್ದಲ್ಲಿ ಎರಡನೇ ಪ್ರಾಶಸ್ತ್ಯದ ಮತಗಳ ಎಣಿಕೆ ಪ್ರಾರಂಭವಾಗಲಿದೆ.

ಈ ಮತದಾನವು ಮತಪತ್ರ ಹಾಗೂ ಪ್ರಾಶಸ್ತ್ಯ ಮತಗಳಿಂದ ನಡೆದಿರುವುದರಿಂದ ಫಲಿತಾಂಶ ವಿಳಂಭವಾಗಲಿದೆ.

ಸೋಮವಾರ ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ಮತ ಚಲಾಯಿಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English