ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ ಒಂದು ಸದಸ್ಯ ಸ್ಥಾನಕ್ಕೆ ಅ.21ರಂದು ಉಪಚುನಾವಣೆ ನಡೆದಿದ್ದು, ಮತ ಎಣಿಕೆ ಪ್ರಕ್ರಿಯೆ ಅಕ್ಟೋಬರ್ 24 ರಂದು ನಡೆಯಿತು.
ಕೋಟ ಶ್ರೀನಿವಾಸ ಪೂಜಾರಿ ಅವರ ಅವಧಿಪೂರ್ವ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಈ ಉಪಚುನಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು 1697 ಮತಗಳ ಅಂತರದಲ್ಲಿ ಜಯಭೇರಿ ಭಾರಿಸಿದ್ದಾರೆ.
ಅ.24 ರಂದು ಮಂಗಳೂರಿನ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ನಡೆದಿದ್ದು ಬಿಜೆಪಿ ಕಿಶೋರ್ ಕುಮಾರ್ 3654 ಮತ, ಕಾಂಗ್ರೆಸ್ ನಿಂದ ರಾಜು ಪೂಜಾರಿ 1757, ಎಸ್.ಡಿ.ಪಿ. ಐ 195, ಪಕ್ಷೇತರ 9 ಮತಗಳನ್ನು ಪಡೆದಿದ್ದಾರೆ..
Click this button or press Ctrl+G to toggle between Kannada and English