ಮಂಜೇಶ್ವರ ಗೋವಿಂದ ಪೈ ಕಾಲೇಜಿನ ವಿದ್ಯಾರ್ಥಿನಿ ಮೃತ್ಯು

11:13 PM, Sunday, October 27th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಜೇಶ್ವರ: ಇಲ್ಲಿನ ಮಂಜೇಶ್ವರ ಗೋವಿಂದ ಪೈ ಸರಕಾರಿ ಕಾಲೇಜಿನ ಪ್ರಥಮ ಪದವಿ ತರಗತಿ ವಿದ್ಯಾರ್ಥಿನಿ ಮುಗು ರೋಡಿನ ಮುಹಮ್ಮದ್ – ಪೌಸಿಯ ದಂಪತಿಗಳ ಪ್ರತ್ರಿ ತ್ವಯಿಬಾ (18) ಅಸೌಖ್ಯದಿಂದ ಮೃತಪಟ್ಟ ಘಟನೆ ಇಂದು ನಡೆದಿದೆ.

ಗೋವಿಂದ ಪೈ ಸರಕಾರಿ ಕಾಲೇಜಿನ ಪ್ರಥಮ ವರ್ಷ ಬಿಟಿಟಿಎಂ ವಿದ್ಯಾರ್ಥಿನಿಯಾದ್ದಳು. ಕಳೆದ ಹಲವು ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಇಂದು ರಾತ್ರಿ ಮೃತಪಟ್ಟಿದ್ದು, ವಿದ್ಯಾರ್ಥಿನಿಯ ಆಕಾಲಿಕ ಮರಣಕ್ಕೆ ಮಂಜೇಶ್ವರ ಗೋವಿಂದ ಪೈ ಸರಕಾರಿ ಕಾಲೇಜಿನ ಪ್ರಾಚಾರ್ಯರಾದ ಮುಹಮ್ಮದ್ ಅಲಿ ಪೆರ್ಲ, ಸಿನಿಯರ್ ಸುಪ್ರಡೆಂಟ್ ದಿನೇಶ್ ಕಾಲೇಜಿನ HOD, ಉಪನ್ಯಾಸಕರು ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಗಾಢವಾದ ಸಂತಾಪವನ್ನು ಸೂಚಿಸಿದ್ದಾರೆ. ಅಕಾಲಿಕ ಮರಣ ಕಾಲೇಜು ನೌಕರರು ಹಾಗೂ ವಿದ್ಯಾರ್ಥಿಗಳನ್ನು ಹಾಗೂ ಮುಗು ಪ್ರದೇಶವಾಸಿಗಳನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English