ದ.ಕ. ಜಿಲ್ಲಾಡಳಿತದಿಂದ ನಗರದ ನೆಹರೂ ಮೈದಾನದಲ್ಲಿ69 ನೇ ಕರ್ನಾಟಕ ರಾಜ್ಯೋತ್ಸವ

12:32 AM, Saturday, November 2nd, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ನಗರದ ನೆಹರೂ ಮೈದಾನದಲ್ಲಿ ದ.ಕ. ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಾಷ್ಟ್ರ ಧ್ವಜ ಅರಳಿಸಿ ಕನ್ನಡ ರಾಜ್ಯೋತ್ಸವದ ಸಂದೇಶ ನೀಡಿದರು.

ಬಳಿಕ ಕನ್ನಡ ರಾಜ್ಯೋತ್ಸವದ ಹದಿನಾಲ್ಕು ತಂಡಗಳಿದ ಗೌರವ ವಂದನೆ ಸ್ವೀಕರಿಸಿ ಪಥಸಂಚಲ ವೀಕ್ಷಿಸಿದರು

ಕರ್ನಾಟಕವು 69ನೇ ಕನ್ನಡ ರಾಜ್ಯೋತ್ಸವದ ಆಚರಿಸುವ ಸಂದರ್ಭದಲ್ಲಿ ನಾಡಿನಾದ್ಯಂತ ಸುಖ ಸಮೃದ್ಧಿ ನೆಲೆಸುವಂತಾಗಲಿ ಎಂದು ನಾಡದೇವಿ ಭುವನೇಶ್ವರಿಯನ್ನು ಪ್ರಾರ್ಥಿಸಿದರು.

ಭಾವೈಕ್ಯತೆಯ ಸ್ವರ್ಗವಾಗಿರುವ ಕರ್ನಾಟಕದಲ್ಲಿ ಎಲ್ಲರೂ ಸಾಮರಸ್ಯದಿಂದ ಬದುಕುತ್ತಿದ್ದಾರೆ. ಸರ್ವಧರ್ಮಗಗ ಸಮರಸ್ಯತೆ ಸಮಾನತೆ ಇಲ್ಲಿ ಮನೆ ಮಾಡಿದೆ. ದೇಶಕ್ಕೆ ನಮ್ಮ ಕನ್ನಡ ಸಾಹಿತ್ಯದ ಕೊಡುಗೆ ಅಪಾರವಾಗಿದೆ ಎಂದರು.

ಸ್ವಾತಂತ್ರ‍್ಯ ನಂತರ ಕರ್ನಾಟಕ ಜನಸಂಖ್ಯಾ ನಿಯಂತ್ರಣಕ್ಕೆ ಅವಿರತವಾಗಿ ಶ್ರಮಿಸಿ ಯಶಸ್ಸು ಕಂಡಿದೆ. ಆದರೆ ಶಿಕ್ಷಣದಲ್ಲಿ ಹಿಂದುಳಿದಿರುವ ಮತ್ತು ಜನಸಂಖ್ಯಾ ನಿಯಂತ್ರಣವನ್ನು ಸಮರ್ಪಕವಾಗಿ ಅಳವಡಿಸದೆ ಇರುವ ಹಿಂದಿ ಮಾತನಾಡುವ ಉತ್ತಮ ರಾಜ್ಯಗಳಿಗೆ ಹೆಚ್ಚು ಲೋಕಸಭಾ ಸದಸ್ಯರನ್ನು ನೀಡಿ ಕಡಿಮೆ ಜನಸಂಖ್ಯೆ ಇರುವ ದಕ್ಷಿಣ ರಾಜ್ಯಗಳಿಗೆ ಲೋಕಸಭಾ ಸದಸ್ಯರನ್ನು ಕಡಿಮೆ ಮಾಡಿ ಕೇಂದ್ರ ಮಟ್ಟದಲ್ಲಿ ದಕ್ಷಿಣ ಭಾರತ ಹಾಗೂ ಕರ್ನಾಟಕದ ಜನರ ಪ್ರಾತಿನಿಧ್ಯವನ್ನೇ ಇಲ್ಲವಾಗಿಸುವ ಕ್ರಮವನ್ನು ನಾವು ಗಂಭೀರವಾಗಿ ಚಿಂತಿಸಬೇಕಾಗಿದೆ ಎಂದು ಹೇಳಿದರು.

ನಮ್ಮ ಕನ್ನಡ ಸಮೃದ್ಧವಾಗಿದೆ ಎಂದು ನಾವು ಸುಮ್ಮನಿರಲಾಗದು. ರಾಜ್ಯವನ್ನು ಸಮೃದ್ಧ ಕರ್ನಾಟಕ ಮಾಡುವುದೇ ಸರಕಾರದ ಗುರಿಯಾಗಿದ್ದು, ಅನೇಕ ಜನಪರ, ಜನಕಲ್ಯಾಣ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಏಕೀಕೃತ ಕರ್ನಾಟಕ ರಾಜ್ಯ ಉದ್ಭವವಾದಾಗಿನಿಂದಲೂ ಕೇಳಿಬರುತ್ತಿದ್ದ ಪ್ರಾದೇಶಿಕ ಅಸಮತೋಲನದ ಕೂಗನ್ನು ನಿವಾರಿಸಲು ರಾಜ್ಯ ಸರಕಾರ ಶ್ರಮಿಸುತ್ತಿದ್ದು ಇತ್ತೀಚೆಗೆ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಸೇರಿ ಆ ಭಾಗದ ಪ್ರಗತಿಗೆ ಅನೇಕ ಯೋಜನೆಗಳನ್ನು ಮತ್ತು ಮಹತ್ವದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ದಿಟ್ಟ ಹೆಜ್ಜೆ ಇಡಲಾಗಿದೆ ಎಂದರು.

59 ಸಾಧಕರು, 24 ಸಂಸ್ಥೆಗಳಿಗೆ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಐವನ್ ಡಿಸೋಜ, ಮೇಯರ್ ಮನೋಜ್ ಕೋಡಿಕ್ಕಲ್, ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಪ್ರವೀಣ್ ಕುಮಾರ್ ಆಳ್ವ ಎ.ಸಿ. ವಿನಯರಾಜ್, ನವೀನ್ ಡಿಸೋಜ, ಶಾಹುಲ್ ಹಮೀದ್, ಕಸಾದ ದ.ಕ. ಜಿಲ್ಲಾಧ್ಯಕ್ಷ ಎಂ.ಪಿ.ಶ್ರೀನಾಥ್, ಸದಾಶಿವ ಉಳ್ಳಾಲ್, ಕಸಾಪ ನಿಕಟಪೂರ್ವ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಕರ್ನಾಟಕ ಬ್ಯಾರಿ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಎಚ್., ಸ್ಟಾನಿ ಅಲ್ವಾರಿಸ್, ದೇವಿಪ್ರಸಾದ್ ಶೆಟ್ಟಿ, ಡಾ. ಶಿವಪ್ರಕಾಶ್ ಇನ್ನಿತರರು ಉಪಸ್ಥಿತರಿದ್ದರು.

ದ.ಕ. ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವದ ವಿಡಿಯೋ

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English