ಮಂಗಳೂರು : ಉಡುಪಿ ಜಿಲ್ಲೆಯ ಕಾಪು ಸಮೀಪದ ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುಕ್ರವಾರ ನಸುಕಿನ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಂಗಳೂರು ಕಡೆಯಿಂದ ಉಡುಪಿಗೆ ಅತಿ ವೇಗವಾಗಿ ತೆರಳುತ್ತಿದ್ದ ಬೈಕ್, ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಬಲವಾಗಿ ಢಿಕ್ಕಿ ಹೊಡೆದಿದೆ.
ಮೃತರ ಗುರುತು: ಈ ದುರ್ಘಟನೆಯಲ್ಲಿ ಬೈಕ್ ಸವಾರ, ಸುಬ್ರಹ್ಮಣ್ಯ ಮೂಲದ ಯುವರಾಜ್ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದೇ ಸಾವಿಗೆ ಕಾರಣ ಎನ್ನಲಾಗಿದೆ.
ಪೊಲೀಸ್ ಭೇಟಿ ಮತ್ತು ಮುಂದಿನ ಕ್ರಮ: ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಉಚ್ಚಿಲದ ಎಸ್ಡಿಪಿಐ ಆಂಬುಲೆನ್ಸ್ ಮೂಲಕ ಕೆ.ಎಂ. ಸಿರಾಜ್ ಮತ್ತು ಜಲಾಲುದ್ದೀನ್ ಅವರು ಮೃತದೇಹವನ್ನು ಅಜ್ಜರಕಾಡು ಆಸ್ಪತ್ರೆಯ ಶವಗಾರಕ್ಕೆ ರವಾನಿಸಲು ನೆರವಾಗಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









