ಅಕ್ರಮ ಮರಳುಗಾರಿಕೆ: ನೀರಿನಲ್ಲಿ ಮುಳುಗಿಸಿಟ್ಟ 7 ದೋಣಿಗಳ ಪತ್ತೆ

1:30 PM, Friday, November 8th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿದ್ದಾರೆ.

ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟೀ ಕಾರ್ಯಾಚರಣೆ ನಡೆಸಿ ಗುರುಪುರ ಅಡ್ಡೂರು ಸಮೀಪ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ 9 ದೋಣಿಗಳನ್ನು ವಶಪಡಿಸಲಾಯಿತು.

ಇದಲ್ಲದೆ, ಅಕ್ರಮ ಮರಳುಗಾರಿಕೆ ನಡೆಸಲು ಉಪಯೋಗಿಸುತ್ತಿದ್ದ 7 ದೋಣಿಗಳನ್ನು ನೀರಿನ ಅಡಿಯಲ್ಲಿ ಮುಳುಗಿಸಿಟ್ಟಿರುವುದು ದಾಳಿ ಸಂದರ್ಭದಲ್ಲಿ ಪತ್ತೆಯಾಗಿದೆ.

ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಗಣಿ ಇಲಾಖೆ ಭೂವಿಜ್ಞಾನಿ ಗಿರೀಶ್ ಮೋಹನ್ ಮತ್ತಿತರರು ಇದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English