ಮಂಗಳೂರು ವಿವಿ: ವಿವಿಧ ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನ

9:20 PM, Wednesday, November 30th, 2022
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ಶೈಕ್ಷಣಿಕ ವರ್ಷ 2022-23ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆಸಲಾಗುವ ವಿವಿಧ ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ವಿದ್ಯಾರ್ಥಿಗಳಿಂದ ಬೇಡಿಗೆ ಬರುತ್ತಿರುವುದರಿಂದ ವಿಶ್ವವಿದ್ಯಾನಿಲಯ ಆವರಣ, ಮಂಗಳಗಂಗೋತ್ರಿ/ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು/ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು/ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿ/ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರ, ಚಿಕ್ಕ ಅಳುವಾರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಕಾಲೇಜುಗಳು (ಸರಕಾರಿ ಕೋಟಾದ ಸೀಟುಗಳಿಗೆ) ಮತ್ತು ಸರಕಾರಿ ಕಾಲೇಜುಗಳಲ್ಲಿ ನಡೆಸಲಾಗುವ ಸ್ನಾತಕೋತ್ತರ ಕಾರ್ಯಕ್ರಮಗಳ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಮತ್ತೊಮ್ಮೆ ಆಹ್ವಾನಿಸಲಾಗಿದೆ.

ಪ್ರವೇಶಾತಿಯನ್ನು UUCMS (ಸಮಗ್ರ ವಿಶ್ವವಿದ್ಯಾನಿಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ) ಪೋರ್ಟಲ್ ಮೂಲಕ ಮಾಡಲಾಗುವುದು. UUCMS ಗೆ ಸಂಬಂಧಿಸಿದ ಎಲ್ಲಾ ಮಾಹಿತಿಯು https://mangaloreuniveristy.ac.in/mu-uucms ನಲ್ಲಿ ಲಭ್ಯವಿದೆ. ಪ್ರವೇಶಾತಿ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು https://uucms.karnataka.gov.in/Login/Index ನಲ್ಲಿ ಲಭ್ಯವಿರುವ UUCMS ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವುದು. ಮೇಲಿನ ಕಾರ್ಯಕ್ರಮಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-12-2022 ಆಗಿರುತ್ತದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English