ಮಂಗಳೂರು : ಸಜೀಪನಡು ಗ್ರಾಮದ ಕಂಚಿನಡ್ಕಪದವಿನಲ್ಲಿರುವ ದೂರದ ಸಂಬಂಧಿ ಹುಡುಗಿಯೊಬ್ಬಳ ಮನೆಗೆ ರಾತ್ರಿ ವೇಳೆ ಭೇಟಿಯಾಗಲು ಬಂದ ಯುವಕನೊಬ್ಬನನ್ನು ತಂಡವೊಂದು ಕಂಬಕ್ಕೆ ಕಟ್ಟಿಹಾಕಿ ಅಮಾನವೀಯವಾಗಿ ಥಳಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಹಲ್ಲೆಗೊಳಗಾದ ಯುವಕನನ್ನು ಬೆಂಗರೆಯ ಅಬ್ದುಲ್ ರಜಾಕ್ ಎಂಬವರ ಮಗ ಮಹಮ್ಮದ್ ಮುಸ್ತಾಪ(21) ಎಂದು ಗುರುತಿಸಲಾಗಿದೆ.
ಯುವಕನಿಗೆ ಹಲ್ಲೆನಡೆಸಿದ ಆರೋಪಿಗಳನ್ನು ಮಹಮ್ಮದ್ ಸಪ್ವಾನ್ (25), ಮಹಮ್ಮದ್ ರಿಜ್ವಾನ್ (25), ಇರ್ಪಾನ್(27), ಅನೀಸ್ ಅಹಮ್ಮದ್ (19), ನಾಸೀರ್ (27), ಶಾಕೀರ್ (18) ಎಂದು ಗುರುತಿಸಲಾಗಿದ್ದು ಹಲ್ಲೆಗೊಳಗಾದ ಯುವಕ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಂತೆ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹಲ್ಲೆಗೊಳಗಾದ ಮಹಮ್ಮದ್ ಮುಸ್ತಾಪ ತನಗಾದ ಗಾಯದ ನೋವು ಹೆಚ್ಚಾಗಿರುವುದರಿಂದ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ಹೈಲ್ಯಾಂಡ್ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಗುಂಪು ಹಲ್ಲೆ ನಡೆಸಿ ಕೊಲೆಯತ್ನ ನಡೆಸಿರುವುದಾಗಿ ಮುಸ್ತಾಪ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ.
ಆರೋಪಿಗಳ ವಿರುದ್ಧ ಅಕ್ರ 99/2024 ಕಲಂ 115(2), 126(2), 189(2), 190, 191(2), 191(3),351(2),352 ಬಿಎನ್ಎಸ್ ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ.
Click this button or press Ctrl+G to toggle between Kannada and English