ಮಂಗಳೂರು: ಸೈಬರ್ ವಂಚನೆ ಪ್ರಕರಣಕ್ಕೆ ಸಂಬಂದಿಸಿದಂತೆ ಮೂವರು ಆರೋಪಿಗಳ ಸಹಿತ ಪ್ರಮುಖ ಆರೋಪಿ ನಿಸಾರ್ ಎಂಬಾತನನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಕೇರಳದ ಕೊಚ್ಚಿಯಲ್ಲಿ ಬಂಧನ ನಡೆದಿದ್ದು, ಆರೋಪಿಯನ್ನು ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಸಿಬಿಐ ಅಧಿಕಾರಿಯಂತೆ ನಟಿಸಿ ಸಂತ್ರಸ್ತರಿಂದ ಸುಮಾರು 68 ಲಕ್ಷ ರೂಪಾಯಿ ಸುಲಿಗೆ ಮಾಡಿದ್ದ ಸೈಬರ್ ವಂಚನೆ ಪ್ರಕರಣದ ನಿಸಾರ್ ಹಲವರನ್ನು ವಂಚಿಸಿದ್ದ ಈತನ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 159/2024 ರ ಅಡಿಯಲ್ಲಿ ದಾಖಲಿಸಲಾಗಿದ್ದು, ಕಲಂ 66(2), 66(2)(2), 308(2), ಮತ್ತು 381(4) ಬಿ.ಎನ್.ಎಸ್. ಅಡಿ ಪ್ರಕರಣ ದಾಖಲಾಗಿದೆ.
ಷೇರು ಮಾರುಕಟ್ಟೆ ವಂಚನೆಯ ಸಂಬಂಧಿತ ಪ್ರಕರಣದಲ್ಲಿ, ಕೇರಳದ ಕೋಝಿಕ್ಕೋಡ್‌ನಲ್ಲಿ ಇನ್ನೂ ಇಬ್ಬರು ಆರೋಪಿಗಳಾದ ಸಾಹಿಲ್ ಕೆ ಪಿ ಮತ್ತು ಮುಹಮ್ಮದ್ ನಶಾತ್ ಎಂಬವರನ್ನು ಬಂಧಿಸಲಾಗಿದೆ, ಸುಮಾರು 90 ಲಕ್ಷ ವಂಚನೆ ಮಾಡಿದ ಇವರ ವಿರುದ್ಧ ಐಟಿ ಕಾಯ್ದೆಯ ಸೆಕ್ಷನ್ 66 (ಸಿ), 66 (ಡಿ) ಮತ್ತು ಬಿಎನ್‌ಎಸ್ ಕಾಯಿದೆಯ 318 (4), 3 (5) ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಮಂಗಳೂರಿನ ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಅವರ ಮಾರ್ಗದರ್ಶನದಲ್ಲಿ ಐಪಿಎಸ್, ಐಪಿಎಸ್, ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ), ಮತ್ತು ದಿನೇಶ್ ಕುಮಾರ್ (ಅಪರಾಧ ಮತ್ತು ಸಂಚಾರ) ಅವರ ಬೆಂಬಲದೊಂದಿಗೆ ಅವರನ್ನು ಬಂಧಿಸಲಾಗಿದೆ. ಎಸಿಪಿ (ಮಂಗಳೂರು ಉತ್ತರ ಉಪವಿಭಾಗ) ಶ್ರೀಕಾಂತ್ ಕೆ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು ಮತ್ತು ಕಾವೂರು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ರಾಘವೇಂದ್ರ ಬೈಂದೂರು ಅವರು ತಮ್ಮ ತಂಡದೊಂದಿಗೆ ಕಾರ್ಯಾಚರಣೆ ನಡೆಸಿದರು.
Click this button or press Ctrl+G to toggle between Kannada and English