ಫಿಫಾ ಫುಟ್‌ಬಾಲ್‌ ಫೈನಲಿನಲ್ಲಿ ಅರ್ಜೆಂಟೀನಾಗೆ ಮೂರನೇ ಬಾರಿ ಚಾಂಪಿಯನ್‌ ಪಟ್ಟ

9:07 PM, Tuesday, December 20th, 2022
Share
1 Star2 Stars3 Stars4 Stars5 Stars
(No Ratings Yet)
Loading...

ಲುಸೈಲ್: ಫಿಫಾ ಫುಟ್‌ಬಾಲ್‌ ಫೈನಲಿನಲ್ಲಿ ಅರ್ಜೆಂಟೀನಾ ಪೆನಾಲ್ಟಿ ಶೂಟೌಟ್‌ನಲ್ಲಿ ಫ್ರಾನ್ಸ್‌ ತಂಡವನ್ನು ಸೋಲಿಸುವ ಮೂಲಕ ವಿಶ್ವ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಕೊನೆಯ ಪಂದ್ಯದಲ್ಲಿ ಮೆಸ್ಸಿ 2 ಗೋಲ್‌ ಹೊಡೆದು ತಂಡಕ್ಕೆ ಜಯ ತಂದು ಕೊಡುವ ಮೂಲಕ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿದೆ.

1978, 1986ರಲ್ಲಿ ಅರ್ಜೆಂಟೀನಾ ಚಾಂಪಿಯನ್‌ ಆಗಿ ಹೊರ ಹೊಮ್ಮಿತ್ತು. 2014ರಲ್ಲಿ ಜರ್ಮನಿ ವಿರುದ್ಧ ಫೈನಲ್‌ನಲ್ಲಿ ಅರ್ಜೆಂಟೀನಾ ಸೋತಿತ್ತು. ಈಗ 36 ವರ್ಷದ ಬಳಿಕ ಮೂರನೇ ಬಾರಿ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿದೆ.

ಫ್ರಾನ್ಸ್‌ ವಿರುದ್ಧದ ಪಂದ್ಯ ಆರಂಭದಲ್ಲೇ ಅರ್ಜೆಂಟೀನಾ ಮುನ್ನಡೆ ಪಡೆದಿತ್ತು. 23ನೇ ನಿಮಿಷದಲ್ಲಿ ಮೆಸ್ಸಿ ಪೆನಾಲ್ಟಿ ಕಿಕ್‌ ಮೂಲಕ ಮೊದಲ ಗೋಲು ಹೊಡೆದರು. ಇದರ ಬೆನ್ನಲ್ಲೇ ಡಿ ಮಾರಿಯಾ 36ನೇ ನಿಮಿಷದಲ್ಲಿ ಗೋಲು ಹೊಡೆದರು. 80ನೇ ನಿಮಿಷದಲ್ಲಿ ಕಿಲಿಯನ್‌ ಎಂಬಾಪೆ ಪೆನಾಲ್ಟಿ ಮೂಲಕ ಫ್ರಾನ್ಸ್‌ ಪರ ಮೊದಲ ಗೋಲು ಬಾರಿಸಿದರು. ಎರಡೇ ನಿಮಿಷದಲ್ಲಿ ಮತ್ತೊಂದು ಗೋಲು ಹೊಡೆದು ಪಂದ್ಯಕ್ಕೆ ರೋಚಕ ತಿರುವು ನೀಡಿದರು.

ನಿಗದಿತ 90 ನಿಮಿಷದಲ್ಲಿ ಎರಡೂ ತಂಡಗಳು ಸಮಬಲ ಸಾಧಿಸಿದ್ದರಿಂದ ಪಂದ್ಯ 30 ನಿಮಿಷಗಳ ಹೆಚ್ಚುವರಿ ಸಮಯಕ್ಕೆ ವಿಸ್ತರಿಸಿತ್ತು. ಈ ವೇಳೆ ಮೆಸ್ಸಿ 109ನೇ ನಿಮಿಷದಲ್ಲಿ ಗೋಲು ಹೊಡೆಯುವ ಮೂಲಕ ಫ್ರಾನ್ಸ್‌ಗೆ ಮುನ್ನಡೆ ತಂದುಕೊಟ್ಟರು. ಆದರೆ 118ನೇ ನಿಮಿಷದಲ್ಲಿ ಎಂಬಾಪೆ ಪೆನಾಲ್ಟಿ ಮೂಲಕ ಗೋಲು ಹೊಡೆದು ಮತ್ತೆ ತಿರುವು ನೀಡಿದರು.

120 ನಿಮಿಷಗಳ ಆಟದಲ್ಲಿ ಎರಡು ತಂಡಗಳು ತಲಾ 3 ಗೋಲ್‌ ಹೊಡೆದ ಕಾರಣ ಫಲಿತಾಂಶ ನಿರ್ಧರಿಸಲು ಪೆನಾಲ್ಟಿ ಶೂಟೌಟ್‌ ಮೊರೆ ಹೋಗಲಾಯಿತು. ಪೆನಾಲ್ಟಿಯಲ್ಲಿ 4-2 ಗೋಲುಗಳಿಂದ ಫ್ರಾನ್ಸ್‌ ತಂಡವನ್ನು ಸೋಲಿಸುವ ಮೂಲಕ ಅರ್ಜೆಂಟೀನಾ ವಿಶ್ವಕಪ್‌ಗೆ ಮುತ್ತಿಕ್ಕಿತು. ವಿಶೇಷ ಏನೆಂದರೆ ಅರ್ಜೆಂಟೀನಾ ಮೊದಲ ಪಂದ್ಯಲ್ಲೇ ಸೌದಿ ಅರೇಬಿಯಾ ವಿರುದ್ಧ ಸೋತಿತ್ತು. ಆದರೆ ನಂತರದ ಪಂದ್ಯಗಳಲ್ಲಿ ಅತ್ಯುತ್ತಮ ಆಟದ ಮೂಲಕ ಫೈನಲ್‌ ಪ್ರವೇಶಿಸಿತ್ತು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English