ಮಂಗಳೂರು : ರಿಯಲ್ ಸ್ಟಾರ್ ಉಪೇಂದ್ರ ನಟನೆಯ UI ಸಿನಿಮಾ ರಿಲೀಸ್‌ಗೆ ಸಜ್ಜಾಗಿದೆ. ಈ ಹಿನ್ನೆಲೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ‘ಯುಐ’ ಟೀಮ್ ಜೊತೆ ಉಪೇಂದ್ರ ಭೇಟಿ ನೀಡಿದ್ದಾರೆ.
‘ಯುಐ’ ವಾರ್ನರ್‌ಗೆ ಅಭಿಮಾನಿಗಳಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಸಿನಿಮಾ ರಿಲೀಸ್‌ಗೂ ಸಿದ್ಧವಾಗಿದೆ. ಈ ಹಿನ್ನೆಲೆ, ಉಪೇಂದ್ರ ಅವರು ಶಕ್ತಿ ದೇವತೆ ದುರ್ಗಾಪರಮೇಶ್ವರಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ದೇವಿಗೆ ಪೂಜೆ ಸಲ್ಲಿಸಿ, ಕೆಲ ಕಾಲ ದೇವಸ್ಥಾನದಲ್ಲಿ ಸಮಯ ಕಳೆದಿದ್ದಾರೆ. ನಂತರ ಉಪೇಂದ್ರ & ಟೀಮ್ ಕೊರಗಜ್ಜ ದೈವದ ದರ್ಶನ ಪಡೆದಿದ್ದಾರೆ.
ಉಪೇಂದ್ರ ಜೊತೆ ನಿರ್ಮಾಪಕ ಕೆ.ಪಿ ಶ್ರೀಕಾಂತ್, ಲಹರಿ ವೇಲು ಹಾಗೂ ನವೀನ್ ಮನೋಹರನ್ ಕೂಡ ದೇವರ ದರ್ಶನ ಪಡೆದಿದ್ದಾರೆ. ಈ ವೇಳೆ, ಉಪೇಂದ್ರ ಜೊತೆಗಿನ ಸೆಲ್ಫಿಗಾಗಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ.
ಅಂದಹಾಗೆ, AI ಯುಗದಲ್ಲಿ UI ಮ್ಯಾಜಿಕ್, ಟ್ರೈಲರ್‌ನಲ್ಲಿ ಮಸ್ತ್ ಆಗಿ ಮೂಡಿ ಬಂದಿದೆ. ಪ್ರೇಕ್ಷಕರ ಬುದ್ದಿವಂತಿಕೆಗೆ UI ವಾರ್ನರ್ (ಟ್ರೈಲರ್) ಸವಾಲು ಹಾಕುವಂತಿದೆ. ಹಸಿವಿಗಾಗಿ ಜನರ ಹೊಡೆದಾಟ, ರಕ್ತಪಾತ ಇದು UI ಟ್ರೈಲರ್‌ನಲ್ಲಿ ರೋಚಕವಾಗಿ ತೋರಿಸಲಾಗಿದೆ. ಜಾತಿ, ಅಧಿಕಾರ ಭಾರತಕ್ಕೆ ಮಾರಕವಾಗುತ್ತ? ಎಂಬ ಜಿದ್ದಾ ಜಿದ್ದಿಯ ನಡುವೆ ಧಿಕ್ಕಾರಕ್ಕಿಂತ ಅಧಿಕಾರಕ್ಕೆ ಬೆಲೆ ಜಾಸ್ತಿ ಎಂದು ಖಡಕ್ ಆಗಿ ಉಪೇಂದ್ರ ಡೈಲಾಗ್ ಹೊಡೆದಿದ್ದಾರೆ. ಗನ್ ಹಿಡಿದು ಜನಗಳ ಕಡೆ ಶೂಟ್ ಮಾಡುತ್ತ ಖಡಕ್ ಲುಕ್‌ನಲ್ಲಿ ಉಪ್ಪಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ UI ಸಿನಿಮಾ ಕಥೆಯ ಬಗ್ಗೆ ಫ್ಯಾನ್ಸ್‌ಗೆ ಕೌತುಕ ಮೂಡುವಂತೆ ಮಾಡಿದ್ದಾರೆ.
ಇನ್ನೂ 2040 ಭವಿಷ್ಯದ ಅಸಲಿ ಕಥೆ ಹೇಳಲು ‘ಯುಐ’ ಸಿನಿಮಾ ಮೂಲಕ ಉಪೇಂದ್ರ ಸಜ್ಜಾಗಿದ್ದಾರೆ. ಡಿ.20ಕ್ಕೆ ರಿಲೀಸ್ ಆಗಲಿರುವ ಈ ಸಿನಿಮಾದಲ್ಲಿ ಉಪೇಂದ್ರಗೆ ಕೊಡಗಿನ ಕುವರಿ ರೀಷ್ಮಾ ನಾಣಯ್ಯ ಜೋಡಿಯಾಗಿದ್ದಾರೆ. ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್‌ಟೈನರ್ಸ್ ಮೂಲಕ ಮಹೋಹರ್ ನಾಯ್ಡು ಹಾಗೂ ಕೆ.ಪಿ ಶ್ರೀಕಾಂತ್ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ.
Click this button or press Ctrl+G to toggle between Kannada and English