ಬಂಟ್ವಾಳ: ತಾಲೂಕಿನ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ಕಾರು ಮತ್ತು ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಇನ್ನುಳಿದಂತೆ ರಿಕ್ಷಾದಲ್ಲಿ ಮಕ್ಕಳು ಸಹಿತ ಎಂಟು ಮಂದಿಗೆ ಗಾಯವಾಗಿದ್ದು ಎಲ್ಲರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರಿನಿಂದ ಪುಂಜಾಲಕಟ್ಟೆ ಕಡೆಗೆ ಬರುತ್ತಿದ್ದ ರಿಟ್ಜ್ ಕಾರು ಹಾಗೂ ಆಪೆ ರಿಕ್ಷಾ ನಡುವೆ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಪಂಜಿಕಲ್ಲು ಬಾಂದೊಟ್ಟು ರೆಚ್ಚಾಡಿ ಹರೀಶ್ ಎಂಬವರ ಪತ್ನಿ ತಿಲಕ (40) ಅವರು ಮೃತಪಟ್ಟಿದ್ದಾರೆ.
ರಿಕ್ಷಾದಲ್ಲಿದ್ದ ಯಶಸ್ವಿನಿ, ಗೀತಾ , ರೇವತಿ, ಸರಸ್ವತಿ, ವೇದಾವತಿ, ರಾಜೀವಿ ಮತ್ತು ಮಕ್ಕಳಾದ ದಿಗಂತ್ ಹಾಗೂ ದಿಶಾನಿ ಅವರು ಗಾಯಗೊಂಡಿದ್ದಾರೆ.
ಮದ್ವದಲ್ಲಿ ನಡೆದ ಸಂಬಂಧಿಕರ ಮನೆಗೆ ಸೀಮಂತ ಕಾರ್ಯಕ್ರಮಕ್ಕೆ ಹೋಗಿ ವಾಪಸು ಮನೆಗೆ ಬರುತ್ತಿರುವ ಸಮಯ ಬಾಂಬಿಲದಲ್ಲಿ ಅಪಘಾತ ಸಂಭವಿಸಿದೆ.ತಿಲಕ ಅವರ ಜೊತೆ ಸಂಬಂಧಿಕರು ಪಂಜಿಕಲ್ಲುವಿನಿಂದ ನಾರಾಯಣ ಪೂಜಾರಿ ಎಂಬವರ ರಿಕ್ಷಾವನ್ನು ಬಾಡಿಗೆ ಮಾಡಿಕೊಂಡು ಹೋಗಿದ್ದರು.
ರಿಕ್ಷಾದಲ್ಲಿ ಇದ್ದ ಎಲ್ಲರೂ ಕೂಡ ಸೀಮಂತ ಕಾರ್ಯಕ್ರಮ ಮುಗಿಸಿ ವಾಪಾಸು ಬರುತ್ತಿದ್ದರು ಎನ್ನಲಾಗಿದೆ. ತಿಲಕ ಸ್ಥಳದಲ್ಲಿಯೇ ಮೃತಪಟ್ಟರೆ ಉಳಿದವರಿಗೆ ಗಂಭೀರವಾಗಿ ಗಾಯವಾಗಿದೆ ಎನ್ನಲಾಗಿದೆ.
ಮಂಗಳೂರಿನ ಜನಪ್ರಿಯ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಬಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಆಸ್ಪತ್ರೆಯ ವೈದ್ಯಾಧಿಕಾರಿಗಳ ಬಳಿ ಆರೋಗ್ಯ ವಿಚಾರಿಸಿದ್ದಾರೆ.
ಘಟನೆಯ ಕುರಿತು ಪಾಣೆಮಂಗಳೂರು ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Click this button or press Ctrl+G to toggle between Kannada and English