ಧರ್ಮಸ್ಥಳದಲ್ಲಿ ಭಕ್ತರ ಗಡಣ, ಅಲಂಕಾರ ಸೇವೆ

12:18 AM, Thursday, January 2nd, 2025
Share
1 Star2 Stars3 Stars4 Stars5 Stars
(No Ratings Yet)
Loading...

ಉಜಿರೆ: ಬೆಂಗಳೂರಿನ ಟಿ.ವಿ.ಎಸ್. ಕಂಪೆನಿ ಉದ್ಯಮಿ ಗೋಪಾಲರಾವ್ ಮತ್ತು ಆನಂದಮೂರ್ತಿ ಬಳಗದವರು ಹೊಸವರ್ಷ ಆಚರಣೆ ಪ್ರಯುಕ್ತ ಬುಧವಾರ ಧರ್ಮಸ್ಥಳದಲ್ಲಿ ದೇವಸ್ಥಾನ, ಬೀಡು (ಹೆಗ್ಗಡೆಯವರ ನಿವಾಸ), ಅನ್ನಪೂರ್ಣ ಭೋಜನಾಲಯ, ಗೋಪುರ, ಮುಖಮಂಟಪ ಹಾಗೂ ವಿವಿಧ ಕಟ್ಟಡಗಳನ್ನು ವಿವಿಧ ಜಾತಿಯ ಹೂವುಗಳು, ಅಡಿಕೆ, ತೆಂಗು, ಭತ್ತದ ತೆನೆ, ಮುಸುಂಬಿ, ದಾಳಿಂಬೆ, ಕಬ್ಬು ಮೊದಲಾದ ಒಂದು ಟನ್ ಹಣ್ಣುಗಳನ್ನು ಬಳಸಿ ಅತ್ಯಾಕರ್ಷಕವಾಗಿ ಸಿಂಗರಿಸಿದ್ದಾರೆ. ಸುಮಾರು 80 ಜನರ ತಂಡ 20 ಲಕ್ಷ ರೂ. ವೆಚ್ಚದಲ್ಲಿ ಅಲಂಕಾರ ಸೇವೆಯನ್ನು ಶ್ರದ್ಧಾ-ಭಕ್ತಿಯಿಂದ ಮಾಡಿ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಭಕ್ತರ ಗಡಣ: ನಾಡಿನೆಲ್ಲೆಡೆಯಿಂದ ಅಧಿಕಸಂಖ್ಯೆಯಲ್ಲಿ ಭಕ್ತರು ಬಂದು ದೇವರ ದರ್ಶನ ಪಡೆದು, ಸೇವೆ ಮಾಡಿ ಧನ್ಯತೆಯನ್ನು ಹೊಂದಿದರು. ಬೀಡಿನಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಎಲ್ಲೆಲ್ಲೂ ಸಂಭ್ರಮ-ಸಡಗರ, ಹಬ್ಬದ ವಾತಾವರಣ. ಪರಿಚಿತರೂ, ಅಪರಿಚಿತರೂ ನಗುಮೊಗದಿಂದ ಪರಸ್ಪರ ಹೊಸವರ್ಷದ ಶುಭಾಶಯಗಳನ್ನು ಹಂಚಿಕೊAಡು ಸಂಭ್ರಮಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English