ಮಂಗಳೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಮೃದ್ಧಿ ಜೆ ಶೆಟ್ಟಿ ಜಾರ್ಖಂಡ್‌ನ ರಾಂಚಿಯಲ್ಲಿ ನಡೆಯುವ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ನಡೆಸುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ ಹಾಗೂ ಹರಿಣಾಕ್ಷಿ ಜೆ ಶೆಟ್ಟಿ ದಂಪತಿಗಳ ಪುತ್ರಿಯಾಗಿದ್ದು, ಕಾಲೇಜಿನ ದೈಹಿಕಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ.ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ಮಾರ್ಗದರ್ಶನ ಪಡೆದಿರುತ್ತಾರೆ.
ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.
Click this button or press Ctrl+G to toggle between Kannada and English