ಕಾಸರಗೋಡು : ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ದಾರುಣವಾಗಿ ಮೃತಪಟ್ಟ ಘಟನೆ ಉಪ್ಪಳದ ಬಾಯಾರಿನ ಲ್ಲಿ ಶನಿವಾರ ಸಂಜೆ ನಡೆದಿದೆ.
ಕುಂಬಳೆ ಭಾಸ್ಕರ ನಗರದ ಅನ್ವರ್ ಮೆಹರೂಫಾ ದಂಪತಿ ಪುತ್ರ ಅನಾಸ್ ಮೃತಪಟ್ಟ ಮಗು.
ಅನಾಸ್ ಶನಿವಾರ ಸಂಜೆ ಮನೆಯಲ್ಲಿ ಪಿಸ್ತಾವನ್ನು ತಿನ್ನುತ್ತಿದ್ದಾಗ ಸಿಪ್ಪೆ ಗಂಟಲಲ್ಲಿ ಸಿಲುಕಿದೆ. ಬಳಿಕ ಮನೆಯವರು ಸಿಪ್ಪೆಯ ಒಂದು ತುಂಡನ್ನು ಹೊರ ತೆಗೆದಿದ್ದು, ಬಳಿಕ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ತಪಾಸಣೆ ನಡೆಸಿದಾಗ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿಲ್ಲ ಎಂದು ತಿಳಿಸಿದ್ದರಿಂದ ಮನೆಗೆ ಕರೆದುಕೊಂಡು ಬರಲಾಯಿತು. ಆದಿತ್ಯವಾರ ಬೆಳಿಗ್ಗೆ ಬಾಲಕನಿಗೆ ಉಸಿರಾಟದ ತೊಂದರೆ ಉಂಟಾಗಿದ್ದು, ಕೆಎಂಸಿ ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಳಿಲ್ಲ.
ಊರಿಗೆ ಬಂದಿದ್ದ ಮಗುವಿನ ತಂದೆ ಅನ್ವರ್ ಒಂದು ವಾರದ ಹಿಂದೆಯಷ್ಟೇ ಗಲ್ಫ್ ಗೆ ತೆರಳಿದ್ದರು. ಸುದ್ದಿ ತಿಳಿದು ತಂದೆ ಊರಿಗೆ ಮರಳಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
Click this button or press Ctrl+G to toggle between Kannada and English