ಮಂಗಳೂರು ಜ್ಯುವೆಲ್ಲರ್ಸ್‌ ನ ಸೇಲ್ಸ್‌ಮ್ಯಾನ್ ಕೊಲೆ, ಶಂಕಿತ ಆರೋಪಿಯ ಸಿಸಿಟಿವಿ ಫೂಟೇಜ್ ಸಂಗ್ರಹ

10:13 PM, Monday, February 6th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ನಗರದ ಬಲ್ಮಠ-ಹಂಪನಕಟ್ಟೆ ರಸ್ತೆಯಲ್ಲಿರುವ ಮಂಗಳೂರು ಜ್ಯುವೆಲ್ಲರ್ಸ್‌ನ ಸೇಲ್ಸ್‌ಮ್ಯಾನ್ ರಾಘವೇಂದ್ರ ಆಚಾರ್ಯರನ್ನು ಚೂರಿಯಿಂದ ಇರಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಯ ಸಿಸಿಟಿವಿ ಚಿತ್ರ ಪೊಲೀಸರಿಗೆ ಲಭ್ಯವಾಗಿದೆ.

ಶಂಕಿತ ಆರೋಪಿಯ ಬಗ್ಗೆ ಮಾಹಿತಿ ದೊರೆತಲ್ಲಿ ನಗರ ಪೊಲೀಸರಿಗೆ ಮಾಹಿತಿ ನೀಡುವಂತೆ ಕೋರಲಾಗಿದೆ. ಮಾಹಿತಿದಾರರ ವಿವರವನ್ನು ಗೌಪ್ಯವಾಗಿಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಫೆ. 3ರಂದು ಮಧ್ಯಾಹ್ನ ಸುಮಾರು 3:30 ಗಂಟೆಯಿಂದ 3:45ರ ನಡುವೆ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಬಲ್ಮಠ ರಸ್ತೆಯಲ್ಲಿನ ಮಂಗಳೂರು ಜ್ಯುವೆಲ್ಲರ್ಸ್ ಗೆ ಈ ವ್ಯಕ್ತಿಯು ಚಿನ್ನ ಖರೀದಿಸುವ ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿಯೊಳಗೆ ಇದ್ದ ಸಿಬ್ಬಂದಿ ರಾಘವೇಂದ್ರ ಆಚಾರ್ ಎಂಬವರನ್ನು ಚೂರಿಯಿಂದ ಇರಿದು ಕೊಲೆ ಮಾಡಿರುತ್ತಾನೆ. ಸ್ಥಳೀಯ ಸಿಸಿಟಿವಿಗಳಲ್ಲಿ ದಾಖಲಾದ ಚಿತ್ರಣಗಳಲ್ಲಿ ಈ ವ್ಯಕ್ತಿಯ ಚಿತ್ರವು ಪತ್ತೆಯಾಗಿದೆ ಪೊಲೀಸರು ತಿಳಿಸಿದ್ದಾರೆ.

ಈ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಎಸಿಪಿ ಸಿಸಿಬಿ ಪಿ.ಎ. ಹೆಗಡೆ-9945054333, ಎಸಿಪಿ ಕೆಂದ್ರ ಉಪವಿಭಾಗದ ಮಹೇಶ್ ಕುಮಾರ್ -9480805320 ಅವರ ಮೊಬೈಲ್ ಸಂಖ್ಯೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English